ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ಅ.9ರಂದು ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ.
ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಖಡಕ್ ವಿಲನ್ ಪಾತ್ರಗಳಲ್ಲಿ ಪ್ರೇಕ್ಷಕರನ್ನ ರಂಜಿಸುತ್ತಿದ್ದ ಪ್ರತಿಭಾನ್ವಿತ ನಟನ ಅಗಲಿಕೆಯಿಂದ ಸ್ಯಾಂಡಲ್‌ವುಡ್ ಶೋಕಸಾಗರದಲ್ಲಿ ಮುಳುಗಿದೆ.
ಪೊಲೀಸ್ ಲಾಕ್ ಅಪ್, ನಮ್ಮೂರ ಹಮ್ಮೀರ ಸೇರಿ 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದ ಸತ್ಯಜಿತ್ ತಮ್ಮ ಮನೋಜ್ಞ ಅಭಿನಯದಿಂದಲೇ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು.
ಮೃತದೇಹವನ್ನು ಬೆಳಿಗ್ಗೆ 8 ಗಂಟೆಯಿಂದ ಹೆಗಡೆ ನಗರದಲ್ಲಿರುವ ಅವರ ನಿವಾಸದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಮಧ್ಯಾಹ್ನ ಹೆಗಡೆ ನಗರದ ಖಬರ್ ಸ್ಥಾನ್‌ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಅನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ಇದೇ ಮುಂದೆ ಅವರ ಬಣ್ಣದ ಬದುಕಿಗೆ ದಾರಿಮಾಡಿಕೊಟ್ಟಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post