ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಮಾಸಿಕ ಗೌರವಧನ ಹೆಚ್ಚಿಸಿ ಸರ್ಕಾರ ಆದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
ಸರ್ಕಾರಿ ಪುಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇ.55ರಷ್ಟು ಅಂಕಗಳನ್ನು ಪಡೆದು, ಎನ್.ಇ.ಟಿ., ಎಸ್.ಎಲ್.ಇ.ಟಿ.ಅಥವಾ ಪಿ.ಹೆಚ್.ಡಿ. ಮಾಡಿಕೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು 11,500ರೂ.ಗಳಿಂದ 13,000ರೂ.ಗೆ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಟ ಶೇ.55ರಷ್ಟು ಅಂಕಗಳನ್ನು ಪಡೆದ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು 9,500ರೂ.ನಿಂದ 11,000ರೂ.ಗೆ ಹೆಚ್ಚಿಸಿ ಆದೇಶಿಸಲಾಗಿದೆ.
ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಬೇಡಿಕೆಗಳ ಕುರಿತು ಸಮಿತಿಯ ಶಿಫಾರಸ್ಸಿನಂತೆ ಆದೇಶ ನೀಡಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಆದೇಶದಲ್ಲಿರುವ ವಿವರ ಹೀಗಿದೆ:
- ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗರಿಷ್ಠ 8/10 ಗಂಟೆಗಳಕಾರ್ಯಭಾರಕ್ಕೆ ಬದಲಾಗಿ, ಗರಿಷ್ಯ 15 ಗಂಟೆಗಳ ಕಾರ್ಯಭಾರವನ್ನು ನೀಡಿ, ಕೆಳಗಿನಂತೆ ಗೌರವಧನವನ್ನು ಹೆಚ್ಚಿಸುವುದು.
-
5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 32,000ರೂ. (ಮೂವತ್ತೆರಡು ಸಾವಿರ ರೂಪಾಯಿಗಳು ಮಾತ್ರ).
- 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 30,000ರೂ. (ಮೂವತ್ತು ಸಾವಿರ ರೂಪಾಯಿಗಳು ಮಾತ್ರ).
- 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 28,000ರೂ. (ಇಪ್ಪತ್ತೆಂಟು ಸಾವಿರ ರೂಪಾಯಿಗಳು ಮಾತ್ರ).
- 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 26,000ರೂ. (ಇಪ್ಪತ್ತಾರು ಸಾವಿರರೂಪಾಯಿಗಳು ಮಾತ್ರ)
- ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆಪಾವತಿ ಮಾಡುವುದು.
- ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ಗೆ ಬದಲಾಗಿ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು.
- ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆಸಂಬಂಧಪಟ್ಟ ಹಾಗೆ. ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವಮಾನದಂಡಗಳನ್ವಯ ಆಯ್ಕೆಪಟ್ಟಿ ತಯಾರಿಸುವುದು) 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 26,000ರೂ. (ಇಪ್ಪತ್ತಾರು ಸಾವಿರ ರೂಪಾಯಿಗಳು ಮಾತ್ರ)
- ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ಗೆ ಬದಲಾಗಿ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು.
- ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆಪಾವತಿ ಮಾಡುವುದು.
- ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆಪಟ್ಟಿ ತಯಾರಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post