ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಆಗಸ್ಟ್ 23ರಿಂದ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಕೊರೋನಾ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭವಾಗಲಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
9 ಹಾಗೂ 10ನೇ ತರಗತಿಗಳಿಗೆ ಆ.23ರಿಂದ ಅರ್ಧದಿನ ಮಾತ್ರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದೆ.
- ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯ
- ಕೋವಿಡ್ ಲಕ್ಷಣಗಳು ಇಲ್ಲದಿರುವ ಬಗ್ಗೆ ಪೋಷಕರು ದೃಢಪಡಿಸಬೇಕು
- ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10-1:30 ಗಂಟೆಯವರೆಗೆ ತರಗತಿಗಳು ನಡೆಯಲಿವೆ
- ಶನಿವಾರ ಬೆಳಿಗ್ಗೆ 10ರಿಂದ 12:30ವರೆಗೆ ಮಾತ್ರ ತರಗತಿಗಳು
- ವಿದ್ಯಾರ್ಥಿಗಳು ಮನೆಯಿಂದಲೇ ಊಟ/ ಕುಡಿಯುವ ನೀರು ತರಬೇಕು
- ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ದಾಯ
- ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲೂ ಹಾಜರಾಗಬಹುದು
- ಅಗತ್ಯವಿದ್ದರೆ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಶುದ್ಧ ಬಿಸಿ ಕುಡಿಯುವ ನೀರಿನ ವ್ಯವಸ್ಥೆ
- ಶಿಕ್ಷಕರು 15-20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿ ಭೌತಿಕ ತರಗತಿ ನಡೆಸಬೇಕು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post