ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಸಂತೋಷದಿಂದ ಶಾಲೆ-ಕಾಲೇಜುಗಳಿಗೆ ಹಾಜರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಿ ತರಗತಿ ನಡೆಸಲು ರಾಜ್ಯಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಲವಾರು ವಿದ್ಯಾರ್ಥಿಗಳು ಮುಕ್ತ ಸಂವಾದ ನಡೆಸಿ, ಶಾಲೆಗೆ ಬಂದಿರುವುದಕ್ಕೆ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಕೋವಿಡ್‌ನಿಂದ ಸ್ವತಂತ್ರ ಸಿಕ್ಕಿದೆ. ಸರ್ಕಾರ ಈ ಬಗ್ಗೆ ಹೆಚ್ಚಿನ ನಿಗಾವಹಿಸಲಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ಕೂಡಲೇ ಹಂತ ಹಂತವಾಗಿ ಶಾಲೆ ಆರಂಭಿಸಲಾಗುವುದು ಎಂದರು.
ಇನ್ನು 1 ರಿಂದ 8 ನೇ ತರಗತಿ ಪ್ರಾರಂಭ ಸಂಬಂಧ ತಜ್ಞರ ಸಮಿತಿ ಈ ತಿಂಗಳಾಂತ್ಯಕ್ಕೆ ವರದಿ ನೀಡಲಿದ್ದು, ಅದರ ಪ್ರಕಾರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post