ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್’ವುಡ್ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿಯಾಗಿದೆ.
ಅವರ ನಿವಾಸದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ವೇಳೆ ಕುಸಿದು ಬಿದ್ದ ಅವರು ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಈ ಕುರಿತಂತೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಧ್ಯಮಗಳಿಗೆ ಮಾತನಾಡಿದ್ದು, ಅವರನ್ನು ಆಸ್ಪತ್ರೆಗೆ ಕರೆತರುವ ವೇಳೆ ಪ್ರಜ್ಞಾಹೀನರಾಗಿದ್ದರು. ಸದ್ಯ ಮೆದುಗಳಿಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಆದರೆ, ಅವರ ಈ ಸ್ಥಿತಿಯಲ್ಲಿ ಸರ್ಜರಿ ಮಾಡುವುದು ಸಾಧ್ಯವಿಲ್ಲ. ಪವಾಡವೇ ನಡೆಯಬೇಕು ಎಂದಿದ್ದಾರೆ.
ಚಿತ್ರರಂಗದ ಹಿರಿಯ ಕೊಂಡಿ ಎಂದೆ ಕರೆಯಿಸಿಕೊಂಡಿರುವ ಶಿವರಾಂ ಅವರ ಆರೋಗ್ಯ ಕ್ಷಣ ಕ್ಷಣಕ್ಕೂ ಹದಗೆಡುತ್ತಿದ್ದು ವೈದ್ಯರು ಕೈ ಚೆಲ್ಲುವ ಸ್ತಿತಿ ತಲುಪಿದ್ದಾರೆ. ಹಾಗಾಗಿ ದೇವರೇ ಕಾಪಾಡಬೇಕು..ದೇವರಲ್ಲಿ ಅವರ ಆರೋಗ್ಯ ಹಾಗೂ ಪುನರ್ ಚೇತರಿಕೆಗೆ ಪ್ರಾರ್ಥಿಸಿ ಎಂದು ಕುಟುಂಬ ಅಪಾರ ಅಭಿಮಾನಿಗಳನ್ನು ಮನವಿ ಮಾಡಿಕೊಂಡಿದೆ.

ಶಿವರಾಂ ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹರಡುತ್ತಿದ್ದಂತೆ ಅಪಾರ ಪ್ರಮಾಣದ ಅಭಿಮಾನಿಗಳು ಹಾಗೂ ಚಿತ್ರರಂಗದ ಅನೇಕ ಗಣ್ಯರು ಆಸ್ಪತ್ರೆಯತ್ತ ದೌಡಾಯಿಸಿ ವೈದ್ಯರ ಬಳಿ ಸಮಾಲೋಚನೆ ನಡೆಸುತ್ತಿದ್ದಾರೆ
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















