ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ರಾಜ್ಯದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/U5X3ccsNoD
— Basavaraj S Bommai (@BSBommai) December 4, 2021
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹ ಕಂಬನಿ ಮಿಡಿದಿದ್ದು, ಹಿರಿಯ ಕಲಾವಿದ ಎಸ್. ಶಿವರಾಂ ಅವರು ಅಪಘಾತಕ್ಕೆ ಈಡಾಗಿ ಜೀವನ್ಮರಣದ ಹೋರಾಟದಲ್ಲಿ ಸೋತಿರುವುದು ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ. ಸತತ ಆರು ದಶಕಗಳ ಕಾಲ ಪೋಷಕ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಕನ್ನಡಿಗರನ್ನು ಮನರಂಜಿಸಿದ ಅವರ ಅಕಾಲಿಕ ಮರಣ ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ ಉಂಟುಮಾಡಿದೆ ಎಂದಿದ್ದಾರೆ.
ಹಿರಿಯ ಕಲಾವಿದ ಶ್ರೀ ಎಸ್. ಶಿವರಾಂ ಅವರು ಅಪಘಾತಕ್ಕೆ ಈಡಾಗಿ ಜೀವನ್ಮರಣದ ಹೋರಾಟದಲ್ಲಿ ಸೋತಿರುವುದು ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ. ಸತತ ಆರು ದಶಕಗಳ ಕಾಲ ಪೋಷಕ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಕನ್ನಡಿಗರನ್ನು ಮನರಂಜಿಸಿದ ಅವರ ಅಕಾಲಿಕ ಮರಣ ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ ಉಂಟುಮಾಡಿದೆ. (1/2) pic.twitter.com/SxIV51TWtL
— H D Devegowda (@H_D_Devegowda) December 4, 2021
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರು, ಚಿತ್ರರಂಗದ ಆಸ್ತಿಯಾಗಿದ್ದ ಹಿರಿಯ ನಟ ಶಿವರಾಂ ಅವರು ನಿಧನರಾದ ಸುದ್ದಿ ತಿಳಿದು ದಿಗ್ಭ್ರಮೆ ಆಯಿತು. ನಮ್ಮ ಚಿತ್ರರಂಗದ ಎಲ್ಲ ಆಗುಹೋಗುಗಳಿಗೆ ಸದಾ ಮಿಡಿಯುತ್ತಿದ್ದ ಅವರ ಅಗಲಿಕೆ ನನಗೆ ಬಹಳ ದುಃಖವುಂಟು ಮಾಡಿದೆ. ಶರಪಂಜರ, ನಾಗರಹಾವು, ಗುರುಶಿಷ್ಯರು, ಗೆಜ್ಜೆಪೂಜೆ, ಉಪಾಸನೆ ಸೇರಿದಂತೆ ಅನೇಕ ಸ್ಮರಣಿಯ ಚಿತ್ರಗಳಲ್ಲಿ ನಟಿಸಿದ್ದ ಶಿವರಾಂ ಅವರು ಚಿತ್ರರಂಗದ ಅಭಿವೃದ್ಧಿಯ ಎಲ್ಲ ಹಂತಗಳಿಗೂ ಸಾಕ್ಷಿಯಾಗಿದ್ದವರು. ದೈವಭಕ್ತರೂ ಆಗಿದ್ದ ಅವರು ಅಧ್ಯಾತ್ಮದತ್ತ ಒಲವು ಹೊಂದಿದ್ದರಲ್ಲದೆ, ಇತರರಲ್ಲೂ ಸಾತ್ವಿಕತೆಯನ್ನು ಮೂಡಿಸುತ್ತಿದ್ದರು. ವೈಯಕ್ತಿಕವಾಗಿ ಶಿವರಾಂ ಅವರ ನಿಧನ ನನಗೆ ತೀವ್ರ ನೋವು ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರು, ಅಭಿಮಾನಿಗಳು, ಚಿತ್ರರಂಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.
ಕನ್ನಡ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರು, ಚಿತ್ರರಂಗದ ಆಸ್ತಿಯಾಗಿದ್ದ ಹಿರಿಯ ನಟ ಶಿವರಾಂ ಅವರು ನಿಧನರಾದ ಸುದ್ದಿ ತಿಳಿದು ದಿಗ್ಭ್ರಮೆ ಆಯಿತು. ನಮ್ಮ ಚಿತ್ರರಂಗದ ಎಲ್ಲ ಆಗುಹೋಗುಗಳಿಗೆ ಸದಾ ಮಿಡಿಯುತ್ತಿದ್ದ ಅವರ ಅಗಲಿಕೆ ನನಗೆ ಬಹಳ ದುಃಖವುಂಟು ಮಾಡಿದೆ.1/3 pic.twitter.com/FBLewtugJC
— H D Kumaraswamy (@hd_kumaraswamy) December 4, 2021
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದಶಕಗಳ ಕಾಲ ತಮ್ಮ ಅಮೋಘ ನಟನೆಯ ಮೂಲಕ ಕಲಾಸೇವೆಗೈದ ಶಿವರಾಂ ಅವರ ನೆನಪು ನಮ್ಮೊಂದಿಗೆ ಸದಾ ಜೀವಂತವಾಗಿರಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದಶಕಗಳ ಕಾಲ ತಮ್ಮ ಅಮೋಘ ನಟನೆಯ ಮೂಲಕ ಕಲಾಸೇವೆಗೈದ ಶಿವರಾಂ ಅವರ ನೆನಪು ನಮ್ಮೊಂದಿಗೆ ಸದಾ ಜೀವಂತವಾಗಿರಲಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/zLUBR1pbTP— Siddaramaiah (@siddaramaiah) December 4, 2021
ಸಚಿವ ಬಿ. ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದು, ಹಿರಿಯ ಪೋಷಕ ನಟ ಶಿವರಾಂ ಅವರು ನಿಧಾನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಮನೋಜ್ಞ ಅಭಿನಯದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗ, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಹಿರಿಯ ಪೋಷಕ ನಟ ಶಿವರಾಂ ಅವರು ನಿಧಾನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.
ಮನೋಜ್ಞ ಅಭಿನಯದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗ, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/KLtHmwRQIN— B Sriramulu (@sriramulubjp) December 4, 2021
ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಟ್ವೀಟ್ ಮಾಡಿ ಗುರುಸ್ವಾಮಿಯವರು ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಕನ್ನಡ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರು, ಚಿತ್ರರಂಗದ ಆಸ್ತಿಯಾಗಿದ್ದ ಹಿರಿಯ ನಟ ಶಿವರಾಂ ಅವರು ನಿಧನರಾದ ಸುದ್ದಿ ತಿಳಿದು ದಿಗ್ಭ್ರಮೆ ಆಯಿತು. ನಮ್ಮ ಚಿತ್ರರಂಗದ ಎಲ್ಲ ಆಗುಹೋಗುಗಳಿಗೆ ಸದಾ ಮಿಡಿಯುತ್ತಿದ್ದ ಅವರ ಅಗಲಿಕೆ ನನಗೆ ಬಹಳ ದುಃಖವುಂಟು ಮಾಡಿದೆ.1/3 pic.twitter.com/FBLewtugJC
— H D Kumaraswamy (@hd_kumaraswamy) December 4, 2021
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post