ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿರಿಯ ನಟ, ರಂಗಕರ್ಮಿ, ಚಿಂತಕ ಪ್ರೊ. ಜಿ.ಕೆ.ಗೋವಿಂದ ರಾವ್ (86) ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.
1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದ ಜಿ.ಕೆ. ಗೋವಿಂದ ರಾವ್, ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿ, ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ರಂಗಭೂಮಿ, ಸಿನಿಮಾರಂಗದ ಒಡನಾಟ ಹೊಂದಿದ್ದ ಅವರು, ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಗಣ್ಯರ ಸಂತಾಪ:
ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕನ್ನಡದ ಹಿರಿಯ ನಟ, ಚಿಂತಕ ಪ್ರೊ ಜಿ.ಕೆ.ಗೋವಿಂದರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ @BSBommai ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. (1/2)
— CM of Karnataka (@CMofKarnataka) October 15, 2021
ಹಿರಿಯ ಚಿಂತಕ, ರಂಗಕರ್ಮಿ ಪ್ರೊ ಜಿ.ಕೆ.ಗೋವಿಂದರಾವ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದ ಅವರು ಚಲನಚಿತ್ರ, ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) October 15, 2021

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post