ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ಚಿತ್ರ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) #Dwarkish ವಿಧಿವಶರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು, ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು.

ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. 1985ರಲ್ಲಿ ನೀ ಬರೆದ ಕಾದಂಬರಿ ಎಂಬ ಚಿತ್ರಕ್ಕೆ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟರು. ಇದು ಸೂಪರ್ ಹಿಟ್ ಆಗಿತ್ತು. ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿ ಸುಮಾರು 15ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post