ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್(66) ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸಂತಾಪ:
ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶೇಷವಾಗಿ ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದ್ದ ಗುಡಿಹಳ್ಳಿ, ಚಿತ್ರದುರ್ಗದಲ್ಲಿ ಹಲವಾರು ವರ್ಷಗಳ ಪ್ರಜಾವಾಣಿ ಪತ್ರಿಕೆಯಲ್ಲಿ ಸುಧೀರ್ಘ ಅವಧಿಗೆ ಕೆಲಸ ಮಾಡಿದ್ದರು.
ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ದುಡಿದವರು. ಕೆಯುಡಬ್ಲ್ಯೂಜೆ ಸಂಘಟನೆಯಲ್ಲಿ ಅವರ ಸೇವೆ ಮರೆಯಲಾಗದು ಎಂದು ಶ್ಲಾಘಿಸಿರುವ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post