No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನರ ಅವಶ್ಯಕತೆಗೆ ಸ್ಪಂದಿಸಿದಾಗ ಮಾತ್ರ ಸೇವೆ ಸಫಲ : ಐಪಿಎಸ್ ತಿಮ್ಮಪ್ಪಯ್ಯ ಮಡಿಯಾಲ್

kalpa News by kalpa News
March 22, 2022
in ಬೆಂಗಳೂರು ನಗರ
0
ಜನರ ಅವಶ್ಯಕತೆಗೆ ಸ್ಪಂದಿಸಿದಾಗ ಮಾತ್ರ ಸೇವೆ ಸಫಲ : ಐಪಿಎಸ್ ತಿಮ್ಮಪ್ಪಯ್ಯ ಮಡಿಯಾಲ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

 

ಜನರ ಅವಶ್ಯಕತೆಗೆ ಸ್ಪಂದಿಸಿದಾಗ ಮಾತ್ರ ನಮ್ಮ ಸೇವೆ ಸಾಫಲ್ಯ ಹೊಂದಲು ಸಾಧ್ಯ ಎಂದು ರಾಜ್ಯ ಪೋಲಿಸ್ ಮಹಾನಿರ್ದೇಶಕ (ಮಾಜಿ) ಐಪಿಎಸ್ ತಿಮ್ಮಪ್ಪಯ್ಯ ಮಡಿಯಾಲ್ IPS Thimmappaiah Madiyal ಹೇಳಿದರು.

ಹವ್ಯಕ ಮಹಾಸಭೆಯಲ್ಲಿ ನಡೆದ “ವಿಜಯೀ ಭವ” -3 ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಸ್ಪೂರ್ತಿಯ ನುಡಿಗಳನ್ನಾಡಿದ ಶ್ರೀರಾಮಚಂದ್ರಾಪುರಮಠದ ಸಮ್ಮುಖ ಸರ್ವಾಧಿಕಾರಿ, ಐಪಿಎಸ್ ತಿಮ್ಮಪ್ಪಯ್ಯ ಮಡಿಯಾಲ್, ನಾನು ಸಾಧನೆ ಮಾಡಿದೆ ಎಂಬುದು ಸರಿಯಲ್ಲ, ಜೀವನದಲ್ಲಿ ಅವಕಾಶಗಳು ಬಂದಾಗ ಅವುಗಳ ಸದುಪಯೋಗ ಮಾಡಿಕೊಳ್ಳುವುದು ಮುಖ್ಯ. ಅವಕಾಶಗಳು ಬಂದಾಗ ಅದನ್ನು ಸಮರ್ಥವಾಗಿ ಬಳಸಿಕೊಂಡಿದ್ದರಿಂದ ವಿವಿಧ ರೀತಿಯಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಯಿತು ಎಂದು ಸೈನ್ಯದಲ್ಲಿ 7 ವರ್ಷ, ಆನಂತರ 33 ವರ್ಷ ಪೋಲಿಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯ ಬಗ್ಗೆ ವಿವರಿಸಿದರು.

1965ರ ಭಾರತ – ಪಾಕ್ ಯುಧ್ಹದ ಸಂದರ್ಭವನ್ನು ಸ್ಮರಿಸಿದ ಅವರು, ಯುದ್ದದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು, ನನ್ನ ಜೀವನ ಅಲ್ಲಿಗೇ ಮುಗಿಯಬಹುದಿತ್ತು, ಯಾವ ತಿರುವನ್ನೂ ಪಡೆದುಕೊಳ್ಳುವ ಸಾಧ್ಯತೆ ಇತ್ತು. ಯುದ್ದದಲ್ಲಿ ನಾವು ಪಾಕಿಸ್ತಾನವನ್ನು ಪ್ರವೇಶಿಸಿ ಆಕ್ರಮಣವನ್ನು ಮಾಡಿದೆವು. ಇದೇ ನನ್ನ ಜೀವನದ ಮೊದಲು ವಿದೇಶಿ ಯಾತ್ರೆ ಎಂದು ವಿವರಿಸಿದರು.
ಮೊದಲಿಂದಲೂ ಸನಾತನ ಸಂಪ್ರದಾಯದಲ್ಲಿ ಜೀವನ ಕ್ರಮವಿದ್ದ ಕಾರಣ, ಮೊದಲು ಸೈನ್ಯದಲ್ಲಿ, ಆನಂತರ ಧಾರ್ಮಿಕ ಕ್ಷೇತ್ರದಲ್ಲಿ (ಶ್ರೀರಾಮಚಂದ್ರಾಪುರಮಠದಲ್ಲಿ) ನೀವು ಸೇವೆ ಸಲ್ಲಿಸಿದರೂ ಹೆಚ್ಚಿನ ವ್ಯತ್ಯಾಸ ನನಗೆ ಅನಿಸಲಿಲ್ಲ. ನನ್ನ ಜೀವನ ಸಿದ್ಧಾಂತದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ ಎಂದು ತಿಳಿಸಿದರು.
ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯವಾದಿಗಳಾದ ಅಶೋಕ್ ಹಾರನಹಳ್ಳಿ ಉದ್ಘಾಟನಾ ನುಡಿಗಳನ್ನಾಡಿ, ಹವ್ಯಕರಲ್ಲಿ ಏಕತೆ ಇದೆ, ಸಮಗ್ರ ಬ್ರಾಹ್ಮಣರಲ್ಲಿ ಇದು ಬರಬೇಕು.  ಹವ್ಯಕ ಮಹಾಸಭೆಯು ಉಳಿದೆಲ್ಲ ಸಂಘಟನೆಗಳಿಗೆ ಆದರ್ಶಪ್ರಾಯವಾಗಿದೆ. ಹವ್ಯಕ ಸಂಘಟನೆ – ವಿಶೇಷ ಕಾರ್ಯಕ್ರಮಗಳು ಹಾಗೂ ಪತ್ರಿಕೆಯನ್ನು ಮಾದರಿಯಾಗಿಟ್ಟುಕೊಂಡು ಬ್ರಾಹ್ಮಣ ಮಹಾಸಭೆಯಲ್ಲಿ ಇವುಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದರು.
ಸೈನ್ಯ – ಪೋಲಿಸ್ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ, ನಿವೃತ್ತ ಜೀವನದಲ್ಲಿ ಶ್ರೀರಾಮಚಂದ್ರಾಪುರಮಠದ ಸಮ್ಮುಖ ಸರ್ವಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ತಿಮ್ಮಪ್ಪಯ್ಯ ಮಡಿಯಾಲ್ ಅವರ ಸಾಧನೆ ಅಮೋಘವಾದದ್ದು. ಹಾಗೆಯೇ ಪತ್ರಿಕಾರಂಗದಲ್ಲಿ ವಿಶ್ವೇಶ್ವರ ಭಟ್ಟರ ಸಾಧನೆ ಅಪ್ರತಿಮವಾದದ್ದು ಎಂದು ಸಾಧಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ಪತ್ರಕರ್ತರು ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ  ವಿಶ್ವೇಶ್ವರ ಭಟ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಸಾಧನೆ ಮಾಡಲು ಅವಕಾಶ ಸಿಗುತ್ತದೆ. ಆದರೆ ಬಹುತೇಕ ಸಮಯಗಳಲ್ಲಿ ನಾವು ಆ ಅವಕಾಶವನ್ನು ಎದುರಿಸಲು ಸಿದ್ಧರಿರುವುದಿಲ್ಲ. ಹರಿಯುವ ನದಿ ಹರಿಯಲು ಆರಂಭಿಸುವಾಗ ಸಣ್ಣ ಸೆಲೆಯಾಗಿ ಮಾತ್ರ ಇರುತ್ತದೆ. ಆನಂತರ ಉಪನದಿಗಳು ಸೇರಿಕೊಂಡು, ಅದು ದೊಡ್ಡ ನದಿಯಾಗಿ ಹರಿಯುತ್ತದೆ. ಹಾಗೆಯೇ ನಮ್ಮ ಜೀವನವೂ ಬೇರೆಬೇರೆ ರೀತಿಯ ಮಜಲನ್ನು ಪಡೆದುಕೊಳ್ಳುತ್ತದೆ. ಆ ಸಂದರ್ಭಗಳಲ್ಲಿ ನಾವು ಹೇಗೆ ಎದುರಿಸುತ್ತೇವೆ, ಹೇಗೆ ಸ್ಪಂದಿಸುತ್ತೇವೆ ಎಂಬುದು ನಮ್ಮ ಸಾಧನೆಯನ್ನು ನಿರ್ಧರಿಸುತ್ತದೆ ಎಂದರು.
Also read: ಅದ್ಧೂರಿ ಮಾರಿಕಾಂಬಾ ಜಾತ್ರೆ: ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ! ಯಾವುದಕ್ಕೆ ಎಷ್ಟು ದರ? ಇಲ್ಲಿದೆ ಮಾಹಿತಿ…ಕುಗ್ರಾಮದಲ್ಲಿ ಹುಟ್ಟಿದ ನಾನು, ಸಂಪಾದಕನಾಗುತ್ತೇನೆ ಎಂಬ ಯಾವ ಕನಸೂ ಇರಲಿಲ್ಲ.  ಬೆಂಗಳೂರಿಗೆ ಬಂದಿದ್ದೇ ಸಾಧನೆ ಎಂದುಕೊಂಡಿದ್ದೆ.  ಬಾಲ್ಯದಲ್ಲಿ ನನ್ನ ಅಜ್ಜನಿಗೆ ಪತ್ರಿಕೆಯನ್ನು ಪ್ರತಿದಿನ ಓದಿ ಹೇಳಬೇಕಿತ್ತು, ಆ ಕಾರಣದಿಂದಲೋ ಏನೋ ನಾನು ಪತ್ರಿಕಾ ರಂಗದೆಡೆಗೆ ಆಕರ್ಷಿತನಾದೆ ಎಂದು ತಮ್ಮ ಬಾಲ್ಯವನ್ನು ಮೆಲುಕು ಹಾಕಿದರು. 15-20 ವರ್ಷಕ್ಕೊಮ್ಮೆ ಎಲ್ಲಾ ಕ್ಷೇತ್ರಗಳು ಬದಲಾವಣೆಯನ್ನು ಬಯಸುತ್ತವೆ. ಆ ಸಂದರ್ಭದಲ್ಲಿ ನಾವು ಸರಿಯಾಗಿ ಬಳಸಿಕೊಂಡರೇ ನಾವು ಬೆಳೆದು, ಆ ಕ್ಷೇತ್ರವನ್ನು ಬೆಳೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ ಕಜೆ, ಪ್ರಧಾನ  ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ, ಉಪಾಧ್ಯಕ್ಷ ಆರ್ ಎಂ ಹೆಗಡೆ, ಶ್ರೀಧರ ಜೆ ಭಟ್ಟ ಕೆಕ್ಕಾರು, ಕಾರ್ಯದರ್ಶಿಗಳಾದ ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಕೋಶಾಧಿಕಾರಿ ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ, ರವಿನಾರಾಯಣ ಪಟ್ಟಾಜೆ ಉಪಸ್ಥಿತರಿದ್ದರು.
ಹುಳೇಗಾರು ನಾರಾಯಣ ಭಟ್, ಸುಕನ್ಯಾ ಸಂಪತ್ ಸಾಧಕರ ಜೊತೆ ಸಂವಾದ ನಡೆಸಿಕೊಟ್ಟರು. ಮೋಹನ ಭಾಸ್ಕರ ಹೆಗಡೆ, ಶ್ರೀಕಾಂತ್ ಹೆಗಡೆ ಅಂತ್ರವಌ ಕಾರ್ಯಕ್ರಮವನ್ನು ನಿರೂಪಿಸಿದರು.  ಕಾರ್ಯಕ್ರಮದ ಕೊನೆಗೆ ಪಾಣಿನಿ ದೆರಾಜೆ ತಂಡದಿಂದ ನಾಕಾರು ತಂತಿ ಸಂಗೀತ ಕಾರ್ಯಕ್ರಮ ಜನಮನ ರಂಜಿಸಿತು.
78ನೇ ವರ್ಷದ ವಾರ್ಷಿಕ ಮಹಾಸಭೆ – ಡಾ.ಕಜೆ ಪುನರಾಯ್ಕೆ:
ಮಲ್ಲೇಶ್ವರದ ಹವ್ಯಕ ಭವನದಲ್ಲಿ 78ನೇ ವರ್ಷದ ವಾರ್ಷಿಕ ಮಹಾಸಭೆ ನಡೆಯಿತು. ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಂಗಳೂರು, ಹಾಸನ, ಕರ್ನಾಟಕ ಇತರೆ ಹಾಗೂ ಸಂಘ ಸಂಸ್ಥೆಗಳಿಗೆ ಸಂಬಂಧಿಸಿ ಚುನಾವಣಾ ಪ್ರಕ್ರಿಯೆ ನಡೆಯಿತು.  ಎಲ್ಲಾ ಕ್ಷೇತ್ರಗಳಿಗೂ ಅವಿರೋಧವಾಗಿ ನಿರ್ದೇಶಕರು ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ರಾಮ ಭಟ್ ಘೋಷಿಸಿದರು. ಆನಂತರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಡಾ. ಗಿರಿಧರ ಕಜೆ 7ನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾದರು.
ಆಡಳಿತ ಮಂಡಳಿ:
ಡಾ. ಗಿರಿಧರ ಕಜೆ – ಅಧ್ಯಕ್ಷರು
ಆರ್ ಎಂ ಹೆಗಡೆ – ಉಪಾಧ್ಯಕ್ಷರು
ಶ್ರೀಧರ ಜೆ ಭಟ್ಟ ಕೆಕ್ಕಾರು – ಉಪಾಧ್ಯಕ್ಷರು
ಸಿಎ. ವೇಣುವಿಘ್ನೇಶ ಸಂಪ – ಪ್ರಧಾನ  ಕಾರ್ಯದರ್ಶಿ
ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ  – ಕಾರ್ಯದರ್ಶಿ
ಆದಿತ್ಯ ಹೆಗಡೆ ಕಲಗಾರು – ಕಾರ್ಯದರ್ಶಿ
ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ – ಕೋಶಾಧಿಕಾರಿ

ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು.
ಬೆಂಗಳೂರು: ಪ್ರಶಾಂತ ಕುಮಾರ್ ಭಟ್, ಕೃಷ್ಣಮೂರ್ತಿ ಭಟ್, ಮಹಾಬಲೇಶ್ವರ ಭಟ್, ಮಹಾಬಲೇಶ್ವರ  ಹೆಗಡೆ
ಉತ್ತರಕನ್ನಡ: ಅರುಣ್ ಹೆಗಡೆ, ಪ್ರಶಾಂತ್ ಹೆಗಡೆ
ಶಿವಮೊಗ್ಗ: ಎಮ್ ಮಂಜುನಾಥ್ ರಾವ್, ಗಣಪತಿ ಭಟ್ ಜೆ.ವಿ
ದಕ್ಷಿಣ ಕನ್ನಡ: ಬಿ ಶಿವಶಂಕರ ಭಟ್, ಪಿ ಈಶ್ವರ ಭಟ್, ಶ್ರೀಪ್ರಕಾಶ್, ರಮೇಶ್ ಭಟ್, ಶಿವಪ್ರಸಾದ್
ಹಾಸನ – ಚಿಕ್ಕಮಗಳೂರು: ಜಿ. ರಾಜಗೋಪಾಲ ಜೋಷಿ
ಕರ್ನಾಟಕ – ಇತರೆ: ಸುರೇಶ್, ನಂದಿಕೇಶ್ವರ ಹೆಗಡೆ
ಸಂಘ – ಸಂಸ್ಥೆ: ಗುರುಪಾದ್
ಮಾಧ್ಯಮ ಸಂಪರ್ಕ: ಸಂದೇಶ ತಲಕಾಲಕೊಪ್ಪ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: IPS Thimmappaiah MadiyalKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಐಪಿಎಸ್ ತಿಮ್ಮಪ್ಪಯ್ಯ ಮಡಿಯಾಲ್ಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅದ್ಧೂರಿ ಮಾರಿಕಾಂಬಾ ಜಾತ್ರೆ: ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ! ಯಾವುದಕ್ಕೆ ಎಷ್ಟು ದರ? ಇಲ್ಲಿದೆ ಮಾಹಿತಿ…

Next Post

ಮಾಲೂರು: ಶ್ರೀ ಸಿದ್ಧಾಂಜನೇಯಸ್ವಾಮಿ ದೇವಸ್ಥಾನದ ದೃಢಕಲಶ ಮಹೋತ್ಸವ ಸಂಪನ್ನ

kalpa News

kalpa News

Next Post
ಮಾಲೂರು: ಶ್ರೀ ಸಿದ್ಧಾಂಜನೇಯಸ್ವಾಮಿ ದೇವಸ್ಥಾನದ ದೃಢಕಲಶ ಮಹೋತ್ಸವ ಸಂಪನ್ನ

ಮಾಲೂರು: ಶ್ರೀ ಸಿದ್ಧಾಂಜನೇಯಸ್ವಾಮಿ ದೇವಸ್ಥಾನದ ದೃಢಕಲಶ ಮಹೋತ್ಸವ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL