ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆದಿದ್ದು, ಒಟ್ಟು ಏಳು ಸ್ಥಾನಗಳಿಗೆ ಯಾವುದೇ ಚುನಾವಣೆಯಿಲ್ಲದೇ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಈ ಕುರಿತಂತೆ ಮಾಹಿತಿ ಪ್ರಕಟಿಸಿರುವ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ, ಒಟ್ಟು ಏಳು ಸ್ಥಾನಗಳ ಪೈಕಿ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದೊರೆತಿದೆ ಎಂದಿದ್ದಾರೆ.
ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವ್ ಪ್ರಸಾದ್, ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಹಾಗೂ ಜೆಡಿಎಸ್ ನಿಂದ ಟಿ.ಎ. ಶರವಣ ಅವರು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
Also read: ಮುಂದೆ ದಿನ ಭಾರತ ಕಾನ್’ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ದೀಪಿಕಾ ಪಡುಕೋಣೆ ಹೇಳಿದ್ದೇಕೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post