ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ವಿರುದ್ಧ ಎಸ್’ಐಟಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ.
ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್’ಐಟಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ.
Also read: ದೇಶದಲ್ಲಿ ಬಿಜೆಪಿ ಹೆಚ್ಚೆಂದರೆ ಎಷ್ಟು ಸ್ಥಾನ ಗೆಲ್ಲುತ್ತದೆ? ಮಂಜುನಾಥ್ ಭಂಡಾರಿ ಹೇಳಿದ ಅಂಕಿಅಂಶ ಇದು
ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಜಿ. ಅರುಣ್ ಅವರು ಎಸ್’ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು.
ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದರು.
ಸಂಸದ ಪ್ರಜ್ವಲ್ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು, ಎಸ್’ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post