ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಟ ಹಾಗೂ ಪಾಠದ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೆಬ್ಬಾಳದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಬ್ಬಾಳ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ (55) ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ ಎನ್ನಲಾಗಿದ್ದು, ಬಾಲಕಿಯರು ನೀಡಿದ್ದ ಮಾಹಿತಿ ಆಧರಿಸಿ ಶಾಲೆಯ ಮುಖ್ಯ ಶಿಕ್ಷಕರೇ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ.
15 ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಶಿಕ್ಷಕನ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಚಿಕ್ಕಬಳ್ಳಾಪುರದವನಾದ ಶಿಕ್ಷಕನಿಗೆ ಮದುವೆಯಾಗಿ, ಮಕ್ಕಳಿದ್ದಾರೆ. ಆರೋಪಿ ವಿದ್ಯಾರ್ಥಿನಿಯರಿಗೆ ಮುತ್ತು ಕೊಡುವುದು ಹಾಗೂ ಮೈ–ಕೈ ಹಾಗೂ ಇತರೆ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಶಿಕ್ಷಕನ ಕೃತ್ಯದ ಬಗ್ಗೆ ಕೆಲ ಬಾಲಕಿಯರಿಂದ ಹೇಳಿಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post