ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪೊಲೀಸ್ ಠಾಣೆಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಹೌದು… ಇತಿಹಾಸದಲ್ಲಿಯೇ ಮೊದಲ ಬಾರಿಗೆ ಒಂದು ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಲಾಗಿದ್ದು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಗಳನ್ನು #Renukaswamy Murder Case ಇರಿಸಲಾಗಿರುವ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Also read: ಬಿಎಸ್‌ವೈಗೆ ಮುಳುವಾಗಲಿದೆಯಾ ಪೋಕ್ಸೋ ಪ್ರಕರಣ | ಗೃಹಸಚಿವರ ಹೇಳಿಕೆಯೇನು?
ಠಾಣೆಯ ಸುತ್ತ ಸೈಡ್ ವಾಲ್ ಗಳನ್ನ ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ. ಜೊತೆಗೆ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿನ್ನೆಯವರೆಗೆ ಅಭಿಮಾನಿಗಳು ಠಾಣೆಯ ಮುಂದೆ ಜಮಾಯಿಸಿದ್ದರು. ಈ ವೇಳೆ ಠಾಣೆ ಮುಂದೆ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಆದರೆ ಇಂದು ಅಭಿಮಾನಿಗಳು ಕೂಡ ಠಾಣೆಯತ್ತ ಸುಳಿದಿಲ್ಲ. ಆದರೂ ಠಾಣೆಯ ಕಾಂಪೌಂಡ್‌ಗೆ ಶಾಮಿಯಾನ ಕಟ್ಟಿದ್ದು, ಭಾರೀ ಅನುಮಾನ ಹುಟ್ಟಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























