No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಗೆ ರಾಜ್ಯ ಪ್ರಶಸ್ತಿಯ ಗರಿ

kalpa News by kalpa News
January 31, 2023
in ಬೆಂಗಳೂರು ನಗರ
0
2019ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಏಳು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ಹೊಂದಿರುವ ರಾಜ್ಯಸರ್ಕಾರದ ಮಾನ್ಯತೆ ಪಡೆದ ಏಕೈಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಕೊಡಮಾಡುವ ರಾಜ್ಯಮಟ್ಟದ 2020-21ನೇ ಸಾಲಿನ ಚೊಚ್ಚಲ
ಅತ್ಯುತ್ತಮ ಜಿಲ್ಲಾ ಸಂಘ ಪ್ರಶಸ್ತಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಘಟಕವು ಆಯ್ಕೆಯಾಗಿದೆ.

ಕಾರ್ಯನಿರತ ಪತ್ರಕರ್ತರ ಸಂಘಗಳನ್ನು ಸಂಘಟನಾತ್ಮಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತ್ಯುತ್ತಮ ಜಿಲ್ಲಾ ಸಂಘ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇದರ ಮೊದಲ ಪ್ರಶಸ್ತಿಯು ಅಧ್ಯಕ್ಷ ಕೆ. ವಿ. ಶಿವಕುಮಾರ್ ನೇತೃತ್ವದ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಗೆ ಸಂದಿರುವುದು ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಹೆಗ್ಗಳಿಕೆಯಾಗಿದೆ.
ಕಳೆದ ಎಂಟು ವರ್ಷಗಳ ಕಾರ್ಯಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಫೆ.4 ಮತ್ತು 5ರಂದು ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಸಮ್ಮೇಳನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಈ ತನಕ ಸಂಘವು ನಡೆಸಿರುವ ಕ್ರಿಯಾಶೀಲ ಕಾರ್ಯಚಟುವಟಿಕೆಗಳು, ಪತ್ರಿಕಾ ಸಂವಾದಗಳು, ಅರ್ಥಪೂರ್ಣ ಪತ್ರಿಕಾ ದಿನಾಚರಣೆಗಳು, ಹಿರಿಯ ಪತ್ರಕರ್ತರನ್ನು ಗುರುತಿಸಿ, ಗೌರವಿಸಿರುವುದು, ಪತ್ರಕರ್ತರ ಹಿತ ಕಾಯುವ ನಿಟ್ಟಿನಲ್ಲಿ ನಡೆಸಲಾದ ಹೋರಾಟಗಳು, ಪತ್ರಕರ್ತರಿಗಾಗಿ ನಡೆಸಲಾದ ಆರೋಗ್ಯ ತಪಾಸಣಾ ಶಿಬಿರಗಳು, ಸಂದರ್ಭಾನುಸಾರದ ಕ್ರೀಡಾ ಕೂಟಗಳು, ಪತ್ರಕರ್ತರ ಕುಟುಂಬ ವರ್ಗ, ಪತ್ರಿಕಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗಾಗಿ ನಡೆಸಲಾಗಿರುವ ವಿಭಿನ್ನ ಕಾರ್ಯಕ್ರಮಗಳು, ಪತ್ರಕರ್ತರ  ಉನ್ನತೀಕರಣಕ್ಕಾಗಿ ನಡೆಸಲಾದ ಕಾರ್ಯಾಗಾರಗಳು, ವಿಶೇಷವಾಗಿ ಸಾಧಕ ಪತ್ರಕರ್ತರನ್ನು ಗುರುತಿಸಿ, ಜಿಲ್ಲಾ ಮಟ್ಟದಲ್ಲಿ ಹಿರಿಯ ಪತ್ರಕರ್ತರ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ಸರಿ ಸುಮಾರು 50ಕ್ಕೂ ಹೆಚ್ಚು ಪತ್ರಕರ್ತರಿಗೆ ಪ್ರದಾನ ಮಾಡಿರುವುದು, ಜೊತೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೊಡಮಾಡುವ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮೊದಲಬಾರಿಗೆ ಅರ್ಥಪೂರ್ಣವಾಗಿ ಸಂಘಟಿಸಿರುವುದು.. ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಜೊತೆಗೆ ಬಹಳ ಮುಖ್ಯವಾಗಿ ಜಿಲ್ಲೆಯ ಎಲ್ಲ ತಾಲೂಕುಗಳ ಶಾಖೆಗಳೂ ಸಹ ಈ ಅವಧಿಯಲ್ಲಿ ನಡೆಸಿರುವ ರಚನಾತ್ಮಕ ಕಾರ್ಯಕ್ರಮಗಳು, ಜಿಲ್ಲಾ ಶಾಖೆಯೊಂದಿಗಿನ ನಿರಂತರ ಸಂಪರ್ಕ, ತಾಲೂಕು ಮಟ್ಟದಲ್ಲಿ ನಡೆಸಲಾದ ಕ್ರೀಡಾಕೂಟಗಳು, ಕಾರ್ಯಾಗಾರಗಳು, ಸಂವಾದಗಳು, ಪತ್ರಕರ್ತರ ಹಿತ ರಕ್ಷಣೆಯ ಕಾರ್ಯಚಟುವಟಿಕೆಗಳನ್ನು ಸಹ ಈ ಪ್ರಶಸ್ತಿಗಾಗಿ ಪರಿಗಣಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ತಿಳಿಸಿದ್ದಾರೆ.

ಅಭಿನಂದನೆ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಷ್ಟಿತ ಪ್ರಶಸ್ತಿಗೆ ಕಾರಣರಾದ ಹಿಂದಿನ ಸಾಲಿನ ಅಧ್ಯಕ್ಷ ಎನ್. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ ಹಾಗೂ ಅಂದಿನ ಕಾರ್ಯಕಾರೀ ಮಂಡಳಿ, ಪ್ರಸ್ತುತ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯಕಾರೀ ಮಂಡಳಿ, ಎಲ್ಲ ತಾಲೂಕುಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಮಂಡಳಿಯ ಸದಸ್ಯರುಗಳಿಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatest News KannadaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಖ್ಯಮಂತ್ರಿ ಅವರ ಪಂಥಾಹ್ವಾನಕ್ಕೆ ರಾಮಲಿಂಗಾ ರೆಡ್ಡಿ ಪ್ರತಿ ಸವಾಲುಗಳೇನು?

Next Post

ವಿಶ್ವವೇ ಮೆಚ್ಚುವ ಸಾಧನೆಯೊಂದಿಗೆ ಉಜ್ವಲ ಭವಿಷ್ಯದತ್ತ ಭಾರತ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

kalpa News

kalpa News

Next Post
ವಿಶ್ವವೇ ಮೆಚ್ಚುವ ಸಾಧನೆಯೊಂದಿಗೆ ಉಜ್ವಲ ಭವಿಷ್ಯದತ್ತ ಭಾರತ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿಶ್ವವೇ ಮೆಚ್ಚುವ ಸಾಧನೆಯೊಂದಿಗೆ ಉಜ್ವಲ ಭವಿಷ್ಯದತ್ತ ಭಾರತ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL