ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದ್ದು, ಈ ಮೂಲಕ ದೇಶವಾಸಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ.
ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಇಳಿಕೆ ಮಾಡಿದ ಬೆನ್ನಲ್ಲೆ ರಾಜ್ಯ ಸರ್ಕಾರವು ತನ್ನ ಜನತೆಗೆ ದೀಪಾವಳಿ ಉಡುಗೊರೆ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 5ರೂ., ಡೀಸೆಲ್‌ಗೆ 10ರೂ. ಕಡಿತ ಮಾಡಿ ಪ್ರಧಾನಿ ನರೇಂದ್ರ ಮೋದಿ ಆದೇಶಿಸಿದ್ದಾರೆ.
ಇದರ ಬೆನ್ನಲ್ಲೆ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 7ರೂ. ಕಡಿತ ಮಾಡಿದೆ. ಈ ನಿರ್ಧಾರದಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 2100 ಕೋಟಿ ರೂ. ನಷ್ಟವಾಗಲಿದೆ.
ಶಿವಮೊಗ್ಗದಲ್ಲಿ ಇಂದಿನ ದರವೆಷ್ಟು?
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖಡಿತ ಮಾಡಿರುವ ನೂತನ ಬೆಲೆ ಇಂದಿನಿಂದಲೇ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 109.24, ಡೀಸೆಲ್ 93.41, ಪವರ್ ಪೆಟ್ರೋಲ್ 101.13 ಹಾಗೂ ಟರ್ಬೋ ಜೆಟ್ 96.74ರೂ.ಗಳಿಗೆ ಇಳಿಕೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post