ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.17ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 20 ಜಿಲ್ಲೆಗಳಲ್ಲಿ ನ.17ರವರೆಗೂ ಮಳೆಯಾಗುವ ಸಾಧ್ಯತೆಯಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಪ್ಪಳ, ರಾಯಚೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Also read: ಗುಡ್ ನ್ಯೂಸ್! ಸಿಎಂ ಬೊಮ್ಮಾಯಿ ಸೂಚನೆ ಹಿನ್ನೆಲೆಯಲ್ಲಿ ದರ ಏರಿಕೆ ಹಿಂಪಡೆದ ಕೆಎಂಎಫ್
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಳಗಿನ ಜಾವ ಹೆಚ್ಚಿನ ಚಳಿ ಬೀಳುವ ಸಂಭವವಿದೆ ಎಂದು ವರದಿಯಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















