No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಲೆನಾಡಿನ ಎಲೆಚುಕ್ಕಿ ರೋಗ | ಸಂಕಷ್ಟದಲ್ಲಿರುವ ರೈತರ ನೆರವಿಗೆ ಬಜೆಟ್’ನಲ್ಲಿ ಘೋಷಣೆ

ಕೃಷಿ, ತೋಟಗಾರಿಕೆಗೆ ಸಿದ್ದರಾಮಯ್ಯರ ಬಜೆಟ್'ನಲ್ಲಿ ಏನೆಲ್ಲಾ ದೊರಕಿತು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2025
in ಬೆಂಗಳೂರು ನಗರ, ಶಿವಮೊಗ್ಗ
0
ಮಲೆನಾಡಿನ ಎಲೆಚುಕ್ಕಿ ರೋಗ | ಸಂಕಷ್ಟದಲ್ಲಿರುವ ರೈತರ ನೆರವಿಗೆ ಬಜೆಟ್’ನಲ್ಲಿ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಮಲೆನಾಡು #Malnad ಜಿಲ್ಲೆಗಳಲ್ಲಿ ಎಲೆ ಚುಕ್ಕಿ ರೋಗದ #Leafspot Disease ಬಾಧೆಗೆ ತುತ್ತಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ವಿವಿಧ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಕುರಿತಂತೆ ಸಿಎಂ ಸಿದ್ದರಾಮಯ್ಯ #CM Siddaramaiah ತಮ್ಮ ಬಜೆಟ್’ನಲ್ಲಿ #Budget ಘೋಷಣೆ ಮಾಡಿದ್ದಾರೆ.
ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ #Arecanut ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೃಷಿ

  • ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು.
  • 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.
  • ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.

  • ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಒದಗಿಸಲಾಗುವುದು.
  • ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
  • ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000 ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.
  • ಜಾಗತಿಕ ಮಟ್ಟದಲ್ಲಿ ಡಿಜಿಟಲ್‌, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.

Also read: ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?

  • ರಾಜ್ಯದಲ್ಲಿ ಚಾಲ್ತಿಯಿರುವ ಹವಾಮಾನ ವಲಯಗಳ ವರ್ಗೀಕರಣ ಬಹಳ ವರ್ಷಗಳ ಹಿಂದೆ ಗುರುತಿಸಲಾಗಿರುವುದರಿಂದ ಹಾಗೂ ಇತ್ತೀಚಿನ ವರ್ಷಗಳ ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು.
  • ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನಕ್ಕೆ ತರಲಾಗುವುದು.
  • ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.
  • ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಕಲ್ಪಿಸಲಾಗುವುದು.

  • ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುವುದು.
  • ಜೈವಿಕ ಕೃಷಿ ಪರಿಕರ ಸ್ಟಾರ್ಟ್‌-ಅಪ್‌ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜಿಸಲಾಗುವುದು.
  • ವಿಶ್ವ ಬ್ಯಾಂಕ್‌ ನೆರವಿನ ರಿವಾರ್ಡ್‌ ಯೋಜನೆಯಡಿ ಈವರೆಗೆ ಒಟ್ಟಾರೆ 12.90 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.
  • ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು ೨೫ ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.
  • ಬರ ಮತ್ತು ರೋಗ ನಿರೋಧಕ ಲಕ್ಷಣಗಳ ಸಂಶೋಧನೆ ಕೈಗೊಂಡು ಬೆಳೆಗಳ ಉತ್ತಮ ತಳಿ ಅಭಿವೃದ್ಧಿಪಡಿಸಲು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ (Phenotyping) ಸೌಲಭ್ಯ ಕಲ್ಪಿಸಲಾಗುವುದು.
  • ಸಾವಯವ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಹಾಗೂ ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್‌ʼ ಅನ್ನು ಸ್ಥಾಪಿಸಲಾಗುವುದು.
  • ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.
  • ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.

ತೋಟಗಾರಿಕೆ

  • ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ 95 ಕೋಟಿ ರೂ. ಅನುದಾನ ಒದಗಿಸಿದೆ.
  • ತೋಟಗಾರಿಕಾ ಬೆಳೆಗಳ ವಿಸ್ತೀರ್ಣ, ಉತ್ಪಾದನೆ, ಬೆಳೆಗಳ ಆರೋಗ್ಯ, ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ ಮಾಹಿತಿ ಒದಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಸ್ಪೇಸ್‌ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪಿಸಲಾಗುವುದು.
  • ರಾಜ್ಯದ 20 GI ಟ್ಯಾಗ್‌ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳು ಕಣ್ಮರೆಯಾಗಿ ನಶಿಸಿ ಹೋಗುವುದನ್ನು ತಪ್ಪಿಸಲು ದೇಶಿ ತಳಿಗಳ ಬೀಜ ಬ್ಯಾಂಕ್‌ ಸ್ಥಾಪಿಸಲಾಗುವುದು.
  • ಬ್ಯಾಡಗಿ ಮೆಣಸಿನಕಾಯಿ ತಳಿಯ ಸಂರಕ್ಷಣೆ ಮತ್ತು ಎಲೆ ಮುಟುರು ರೋಗ, ತ್ರಿಪ್ಸ್‌ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ಕೈಗೊಳ್ಳಲಾಗುವುದು.
  • ತೋಟಗಾರಿಕೆ ಇಲಾಖೆಯ ಅಧೀನದ ಆಯ್ದ ಕ್ಷೇತ್ರಗಳು ಮತ್ತು ನರ್ಸರಿಗಳಡಿ ಸಾರ್ವಜನಿಕ-ಖಾಸಗಿ ಸಹಯೋಗದೊಂದಿಗೆ ಹೂ-ಕೃಷಿ, ಅಲಂಕಾರಿಕ ಸಸ್ಯಗಳು, ಔಷಧೀಯ ಸಸ್ಯಗಳನ್ನು ಬೆಳೆಸಲು ಹಾಗೂ ತೋಟಗಾರಿಕಾ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರ್ಯಕ್ರಮವನ್ನು ರೂಪಿಸಲಾಗುವುದು.
  • ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.
  • ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯ ಧನವನ್ನು ಒದಗಿಸಲಾಗುವುದು.
  • ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಒದಗಿಸಲಾಗಿದೆ.
  • ತೆಂಗು ಬೆಳೆಯುವ ಪ್ರದೇಶಗಳಲ್ಲಿ ಕಪ್ಪು ತಲೆ ಹುಳುವಿನ ಬಾಧೆಯ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ, ಇದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: ArecanutBangalore/ShivamoggaBudgetCM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLeafspot DiseaseLocalNewsMalnadMalnadNewsNews_in_KannadaNews_KannadaShimogaShivamoggaNewsಅಡಿಕೆಎಲೆ ಚುಕ್ಕಿ ರೋಗಬಜೆಟ್ಬೆಂಗಳೂರು/ಶಿವಮೊಗ್ಗ:ಮಲೆನಾಡುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಿಎಂ ಸಿದ್ದರಾಮಯ್ಯ
Share196Tweet123Send
Previous Post

ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?

Next Post

ಹೈಕೋರ್ಟ್’ನಂತೆ ಶಿವಮೊಗ್ಗ ಜಿಲ್ಲಾ ಕೋರ್ಟ್ ಕಲಾಪ ಯುಟ್ಯೂಬ್’ನಲ್ಲಿ ಲೈವ್? ಯಾವಾಗನಿಂದ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೈಕೋರ್ಟ್’ನಂತೆ ಶಿವಮೊಗ್ಗ ಜಿಲ್ಲಾ ಕೋರ್ಟ್ ಕಲಾಪ ಯುಟ್ಯೂಬ್’ನಲ್ಲಿ ಲೈವ್? ಯಾವಾಗನಿಂದ?

ಹೈಕೋರ್ಟ್'ನಂತೆ ಶಿವಮೊಗ್ಗ ಜಿಲ್ಲಾ ಕೋರ್ಟ್ ಕಲಾಪ ಯುಟ್ಯೂಬ್'ನಲ್ಲಿ ಲೈವ್? ಯಾವಾಗನಿಂದ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL