ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಇಂದು ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿ ಬೆಂಗಳೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ದಾಳಿ #Lokayuktha raid ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ನಡೆದಿದೆ.
ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Also read: ಶಿವಮೊಗ್ಗ ಸೇರಿ ಈ ಐದು ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆಯಿದೆ?
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂದಿದ್ದ 12 ದೂರುಗಳ ಸಂಬಂಧ ಈ ಶೋಧಕಾರ್ಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಪೊಲೀಸ್ 100 ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಶಿವಮೊಗ್ಗದ ಎಲ್ಲೆಲ್ಲಿ ದಾಳಿ?
ಶಿವಮೊಗ್ಗ ಹಾಗೂ ಭದ್ರಾವತಿಯ ಅಂತರಗAಗೆ ಗ್ರಾಮದಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಕೃಷಿ ನಗರದಲ್ಲಿರುವ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಸ್’ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮನೆಯಲ್ಲಿರುವವರ ವಿಚಾರಣೆ ಮತ್ತು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನು, ಭದ್ರಾವತಿಯ ಅಂತರಗAಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಅವರ ಮನೆ ಮೇಲೆ ದಾಳಿ ನಡೆಸಿದೆ. ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಲಾಗಿದ್ದು, ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















