ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ Rain forecast ಎಂದು ವರದಿಯಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದಿದೆ.
ತಮಿಳುನಾಡಿನ ಕರಾವಳಿ ಭಾಗಕ್ಕೆ ವಾಯುಭಾರ ಕುಸಿತ ಬಂದು ತಲುಪಲಿದ್ದು, ಇದರ ಪರಿಣಾಮ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿ¯್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ.
Also read: ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ | ವಿದ್ಯಾರ್ಥಿಗಳು ಮನೆಗೆ | ಬಾಂಬ್ ನಿಷ್ಕ್ರೀಯ ದಳ ದೌಡು
ಎಲ್ಲೆಲ್ಲಿ ಮಳೆ ಸಾಧ್ಯತೆ?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post