ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಕೆಇಎ ಮೂಲಕ ನಡೆಸಲಾಗುತ್ತಿರುವ ಗ್ರಾಮ ಆಡಳಿತ ಅಧಿಕಾರಿ ಮತ್ತು ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ನಿಗದಿಪಡಿಸಲಾಗಿರುವ ಪರೀಕ್ಷಾ ಶುಲ್ಕವನ್ನು ಇಳಿಕೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ, ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ D S Arun ಸದನದಲ್ಲಿ ಅಭ್ಯರ್ಥಿಗಳ ಪರವಾಗಿ ಧ್ವನಿಯಾಗಿದ್ದಾರೆ.
ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ Minister MC Sudhakar ಅವರಲ್ಲಿ ಮನವಿ ಮಾಡಿರುವ ಅರುಣ್, ರಾಜ್ಯದ ಲಕ್ಷಾಂತರ ಬಡ ಅಭ್ಯರ್ಥಿಗಳ ಹಿತಕಾಯುವಂತೆ ಕೋರಿದ್ದಾರೆ.
ರಾಜ್ಯದಾದ್ಯಂತ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಲಕ್ಷಾಂತರ ಅಭ್ಯರ್ಥಿಗಳು ಕಡು ಬಡವರಾಗಿದ್ದು ಸಾಲ ಶೂಲ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಂಡಿದ್ದಾರೆ. ಪ್ರಸ್ತುತ ಪ್ರಾಧಿಕಾರವು ಈ ಹಿಂದೆ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಅರ್ಜಿ ಶುಲ್ಕವನ್ನು ಈಗ ಸಾಮಾನ್ಯ ವರ್ಗ ಮತ್ತು ಇತರೆ ಪ್ರವರ್ಗಗಳಿಗೆ ರೂ.750 ರೂ, ಎಸ್ಸಿ, ಎಸ್ಟಿ, ಪ್ರವರ್ಗ -1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 500 ರೂ ಗೆ ಹೆಚ್ಚಿಸಿದ್ದು ಈ ಶುಲ್ಕವನ್ನು ಬರೆಸಲು ಅಭ್ಯರ್ಥಿಗಳಿಗೆ ಕಷ್ಟವಾಗುತ್ತದೆ ಎಂದು ಅಭ್ಯರ್ಥಿಗಳು ಮಾನ್ಯ ಶಾಸಕರ ಬಳಿ ತಮ್ಮ ವೇದನೆಯನ್ನು ವ್ಯಕ್ತಪಡಿಸಿರುವುದಾಗಿ ತಿಳಿಸಿದರು.ರಾಜ್ಯದ ಲಕ್ಷಾಂತರ ಬಡ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗುವ 2024ರ ಮಾರ್ಚ್ 4ರ ಒಳಗಾಗಿ ಅರ್ಜಿ ಶುಲ್ಕವನ್ನು ಸಾಮಾನ್ಯ ವರ್ಗದವರಿಗೆ 400 ರೂ, ಇತರೆ ಪ್ರವರ್ಗದ ಅಭ್ಯರ್ಥಿಗಳಿಗೆ ರೂ.300, ಮತ್ತು ಎಸ್ಸಿ ,ಎಸ್ಟಿ, ಪ್ರವರ್ಗ- ಒಂದು, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ 150ರೂ ರಂತೆ ಶುಲ್ಕವನ್ನು ನಿಗರಿ ಪಡಿಸಬೇಕು ಹಾಗೂ ಸ್ಪರ್ಧಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಶಾಸಕ ಅರುಣ್ ಅವರ ಮನವಿಗೆ ಪ್ರತಿಕ್ರಿಯಿಸಿದ ಸಚಿವರು, ಮನವಿಯನ್ನು ಪರಿಗಣಿಸಿ, ಅಧಿಕಾರಿಗಳೊಡನೆ ಚರ್ಚಿಸಿ ಶೀಘ್ರದಲ್ಲಿ ಪರಿಹಾರ ದೊರಕಿಸಿ ಕೊಡುವಂತೆ ಭರವಸೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post