ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಮಲೆನಾಡು #Malnad ಜಿಲ್ಲೆಗಳಲ್ಲಿ ಎಲೆ ಚುಕ್ಕಿ ರೋಗದ #Leaf Spot Disease ಬಾಧೆಗೆ ತುತ್ತಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ವಿವಿಧ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್’ನಲ್ಲಿ ಘೋಷಣೆ ಮಾಡಿದ್ದಾರೆ.

Also read: ಅಲ್ಪಸಂಖ್ಯಾತರಿಗೆ ಬಜೆಟ್’ನಲ್ಲಿ ಭರಪೂರ ಕೊಡುಗೆ | ಮುಸ್ಲಿಮರಿಗೆ ಸಿಂಹಪಾಲು ಕೊಟ್ಟ ಸಿದ್ದರಾಮಯ್ಯ
ಕರಾವಳಿ, ಮಲೆನಾಡು ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರ ಎಂಎಡಿಬಿಗೆ 80 ಕೋಟಿ ರೂ ಅನುದಾನ ಇರಿಸಲಾಗಿದೆ. ಕಳೆದ ಬಾರಿ 35 ಕೋಟಿ ರೂ. ಬಿಡುಗಡೆಯಾಗಿತ್ತು. ಈ ಬಾರಿ ರಾಜ್ಯ ಸರ್ಕಾರ 80 ಕೋಟಿ ರೂ. ಅನುದಾನ ನೀಡಲಾಗಿದೆ.

ಪ್ರಮುಖವಾಗಿ, ಕೆಎಫ್’ಡಿ ಹಾಗೂ ಇತರೆ ರೋಗಗಳಿಗೆ 50 ಕೋಟಿ ಮೀಸಲಿರಿಸಲಾಗಿದೆ.
ಅಲ್ಲದೇ, ಶಿವಮೊಗ್ಗ ಹಾಗೂ ಮಲೆನಾಡಿನಲ್ಲಿ ಭೂಕುಸಿತ ತಡೆಗೆ 200 ಕೋಟಿ ರೂ. ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ.
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಹಾಗೂ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡುವ ಭರವಸೆ ನೀಡಲಾಗಿದೆ.

10,240 ಕೋಟಿ ರೂ. ವೆಚ್ಚದ 2,000 ಮೆಗಾವ್ಯಾಟ್ ಶರಾವತಿ ಪಂಪ್ಡ್ ಸ್ಟೋರೇಜ್ ಪವರ್ ಪ್ಲಾಂಟ್ ಅನುಷ್ಠಾನಕ್ಕಾಗಿ ವನ್ಯಜೀವಿ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post