ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಬೆಂಗಳೂರಿನ ಎಚ್ ಎಂಟಿ ಗ್ರೌಂಡ್ ನಲ್ಲಿ ಇದೇ ಅಕ್ಟೋಬರ್ 14 ರಿಂದ 16ರವರೆಗೆ ಕರ್ನಾಟಕ ರಾಜ್ಯ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಶಿವಮೊಗ್ಗದ ಬಾಕ್ಸಿಂಗ್ ಕೋಚ್ ವೆಂಕಟೇಶ್ ರವರ ವಿದ್ಯಾರ್ಥಿ ಮಲ್ಲಿಕಾರ್ಜುನ್ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದು, ವಿಜೇತ ಕ್ರೀಡಾಪಟುವಿಗೆ ಇಂದು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ನ ಉಪಾಧ್ಯಕ್ಷರಾದ ಡಾ ಮಂಜೇಗೌಡ ಅವರು ಪದಕ ವಿತರಣೆ ಮಾಡಿದರು.
ಶಿವಮೊಗ್ಗದಲ್ಲಿ ಬಾಕ್ಸಿಂಗ್ ಕ್ರೀಡೆಯ ಬೆಳವಣಿಗೆಯಲ್ಲಿ ಮತ್ತೊಂದು ಮೈಲಿಗಲ್ಲು ಇದಾಗಿದ್ದು, ವಿಜೇತ ಕ್ರೀಡಾಪಟುವಿಗೆ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದನೆ ತಿಳಿಸಿದ್ದಾರೆ.











Discussion about this post