ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳ ಬಾಕಿಯಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ತಗುಲಿದ್ದು, ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ. ನಂಜುಂಡಿ #K P Nanjundi ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿಗೆ ತೆರಳಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರವನ್ನು ನಂಜುಂಡಿ ಸಲ್ಲಿಸಿದ್ದಾರೆ.
ಕೆ.ಪಿ. ನಂಜುಂಡಿ ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ #B S Yadiyurappa ಬಣದಲ್ಲಿ ಗುರುತಿಸಿಕೊಂಡಿದ್ದರು.
ಕೆ.ಪಿ. ನಂಜುಂಡಿ ಅವರನ್ನು ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ #D K Shivakumar ಭೇಟಿಯಾಗಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸಹ ನಂಜುಂಡಿ ಭೇಟಿಯಾಗಿದ್ದರು.
Also read: ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ | ಮಾಜಿ ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ ಏನು?
ಕೆ.ಪಿ. ನಂಜುಂಡಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post