ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ #Renukaswamy Murder Case ಹೈಕೋರ್ಟ್ #High Court ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ #Supreme Court ರದ್ದು ಮಾಡಿದ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆಯುತ್ತಿವೆ.
ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, #DCM D K Shivakumar ಸುಪ್ರೀಂ ಕೋರ್ಟ್ ಆದೇಶದಿಂದ ಶಾಕ್ ಆಗಿದೆ ಎಂದಿದ್ದಾರೆ.
ಜಾಮೀನು ರದ್ದು ಮಾಡಿರುವ ಆದೇಶ ಶಾಕ್ ನೀಡಿದೆ. ಆದರೆ ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ ಎಂದಿದ್ದಾರೆ.
ಜೈಲಿನಲ್ಲಿ ದರ್ಶನ್ ಸೇರಿದಂತೆ ಯಾವ ಅಪರಾಧಿಗಳಿಗೂ ವಿಐಪಿ ಟ್ರೀಟ್ಮೆಂಟ್ ನೀಡಬಾರದು. ನಾವು ಇದನ್ನು ಗಮನಿಸುತ್ತೇವೆ ಎಂದು ಸುಪ್ರೀಂ ಖಡಕ್ ಸೂಚನೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈ ವಿಚಾರದಲ್ಲಿ ನಾವು ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದಷ್ಟೇ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post