ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೆನ್ನೆ ಹೊಸಪೇಟೆಯಲ್ಲಿ ದರ್ಶನ್ Darshan ಅವರ ಮೇಲೆ ನಡೆದ ದುಷ್ಕೃತ್ಯ ತಮ್ಮ ಮನಸ್ಸಿಗೆ ನೋವುಂಟು ಮಾಡಿದೆ ಎಂದು ನಟ ಶಿವರಾಜ್ ಕುಮಾರ್ Actor Shivraj Kumar ಹೇಳಿದ್ದಾರೆ.
ಕಲಾವಿದರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರು. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಅಭಿಮಾನದಿಂದ ಪ್ರೀತಿಯನ್ನು ತೋರಿ, ದ್ವೇಷ – ಅಗೌರವವನ್ನಲ್ಲ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post