ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಯೋಧ್ಯೆಯ ಶ್ರೀರಾಮ ಮಂದಿರ Ayodhya Rama mandira ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ R Ashok ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್’ಗೆ ಅಫಿಡವಿಟ್ ಸಲ್ಲಿಸಿದ್ದರು ಎಂದರು.

ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಹಾಗೂ ಬೆಂಗಳೂರಿನಲ್ಲಿ ಸುಮಾರು 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿರಿಸಲು ಜಾಗ ಇರುವುದಿಲ್ಲ. ಕಾಂಗ್ರೆಸ್ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. ಅವರು ಕ್ರಿಮಿನಲ್ ಎಂದು ಹೇಳುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಇಲ್ಲ. ಅವರು ಕ್ರಿಮಿನಲ್ ಎನ್ನುವುದಾದರೆ ಸೋನಿಯಾ ಗಾಂಧಿ, Sonia Gandhi ರಾಹುಲ್ ಗಾಂಧಿ, Rahul Gandhi ಡಿ.ಕೆ. ಶಿವಕುಮಾರ್, D K Shivakumar ಶಶಿ ತರ್ರೂ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಾದಾಗ ಎಲ್ಲರೂ ಪ್ರತಿಭಟಿಸಿದರು. ಕ್ರಿಮಿನಲ್ ಪ್ರಕರಣದಲ್ಲಿ ಬೇಲ್ ಪಡೆದು ಹೊರಬಂದಾಗ ಅದ್ದೂರಿ ಸ್ವಾಗತ ಕೋರಿದರು. ಆಟೋರಿಕ್ಷಾ ಓಡಿಸುವ ಬಡವರಿಗೆ ಒಂದು ಕಾನೂನು, ಶ್ರೀಮಂತರಿಗೆ ಒಂದು ಕಾನೂನು. ಸಿದ್ದರಾಮಯ್ಯನವರು ಶ್ರೀಮಂತರ ಪರ ವಕಾಲತ್ತು ವಹಿಸುತ್ತಿದ್ದಾರೆ. ನಾನು ಕೂಡ ಸಚಿವನಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರನ್ನು ಲಾಂಗ್ ಪೆಂಡಿಂಗ್ ಕೇಸ್ ನೆಪದಲ್ಲಿ ಜೈಲಿಗೆ ಹಾಕಿಲ್ಲ ಎಂದರು.
Also read: ಗಮನಿಸಿ! ಜ.6ರ ನಾಳೆ ಶಿವಮೊಗ್ಗದ ಬಹುತೇಕ ಕಡೆ ಕರೆಂಟ್ ಇರಲ್ಲ | ನಿಮ್ಮ ಏರಿಯಾ ಇದೆಯಾ?
ಅಯೋಧ್ಯಾ ಶ್ರೀರಾಮಮಂದಿರ ಉದ್ಘಾಟನೆಗೆ ಅಡ್ಡಿಪಡಿಸಲು ಈ ರೀತಿ ಮಾಡುತ್ತಿದ್ದಾರೆ. ಗೋಧ್ರಾ ಹತ್ಯಾಕಾಂಡದ ಕುರಿತು ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ರಾಷ್ಟ್ರವಾದರೆ ಇದು ಪಾಕಿಸ್ತಾನ ಆಗಲಿದೆ ಎಂದು ಮಾಜಿ ಶಾಸಕ ಯತೀಂದ್ರ ಹೇಳಿದ್ದಾರೆ. ಇದು ಎಂದಿಗೂ ಪಾಕಿಸ್ತಾನವಾಗಲು ಸಾಧ್ಯವಿಲ್ಲ. ಇದನ್ನು ಮುಸಲ್ಮಾನ ರಾಷ್ಟ್ರ ಮಾಡಬೇಕೆ ಎಂದು ಪ್ರಶ್ನಿಸಿದರು.

ಸರ್ಕಾರಕ್ಕೆ ಪ್ರಶ್ನೆಗಳನ್ನಿಟ್ಟ ಪ್ರತಿಪಕ್ಷ ನಾಯಕ ಆರ್. ಅಶೋಕ ಶ್ರೀಕಾಂತ ಪೂಜಾರಿ ತಲೆಮರೆಸಿಕೊಂಡಿದ್ದಾನೆ ಎಂದಿದ್ದಾರೆ. ಆದರೆ ನೋಟಿಸ್ ಏಕೆ ನೀಡಿಲ್ಲ? ಕೋರ್ಟ್’ಗೆ ರಜೆ ಇರುವಾಗ ಬಂಧನ ಮಾಡಿದ್ದೇಕೆ? ಎಫ್‌ಐಆರ್ ಪ್ರತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post