ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಗೂ Parliament Election ಮುನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಆಯವ್ಯಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್ ನೀಡಿದ್ದು, ಈ ಮೂಲಕ ಓಟ್ ಬ್ಯಾಂಕ್ ಗಟ್ಟಿಮಾಡಿಕೊಳ್ಳಲು ಮುಂದಾಗಿದೆ.
ಸಿದ್ದರಾಮಯ್ಯ ಮಂಡಿಸಿದ ಬಜೆಟ್’ನಲ್ಲಿ CM Siddaramaiah State Budget ಅಲ್ಪಸಂಖ್ಯಾತ ಸಮುದಾಯಕ್ಕೆ ಕೋಟಿ ಕೋಟಿ ರೂಪಾಯಿ ಅನುದಾನಗಳ ಜೊತೆಗೆ ವಸತಿ ಸಾಲೆ, ಕಡ್ಡಿಮೆ ಬಡ್ಡಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ರಾಜ್ಯದಲ್ಲಿನ ಪ್ರಮುಖ ಅಲ್ಪಸಂಖ್ಯಾತ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದಿರುವ ಸಿದ್ದರಾಮಯ್ಯ, ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್’ಎಫ್’ಸಿ ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು ಎಂದಿದ್ದಾರೆ.
ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆಎಂಡಿಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
Also read: ಸಿದ್ದರಾಮಯ್ಯ ಬಜೆಟ್’ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ಬಜೆಟ್’ನಲ್ಲಿ ಅಲ್ಪ ಸಂಖ್ಯಾತರಿಗೆ ಏನೆಲ್ಲಾ ಸಿಕ್ಕಿದೆ?
- ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ರೂ. ಅನುದಾನ
- ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ.
- ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ
- ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ.
- ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ
- ಕೈಗಾರಿಕೆ ಸ್ಥಾಪನೆಗೆ 10 ಕೋಟಿ ರೂ.ವರೆಗೂ ಸಾಲ
- ಶೇ.6 ರಷ್ಟು ಬಡ್ಡಿ ಸಹಾಯಧನದ ಮೂಲಕ ಈ ಸಾಲ ಸೌಲಭ್ಯ
- ಅಲ್ಪ ಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 10 ಕೋಟಿ ರೂ. ಅನುದಾನ
- 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ ರಾಜ್ಯದಲ್ಲಿ ಆರಂಭ
- 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭ
- 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ಆರಂಭ
- ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಆರಂಭ
- ನರ್ಸಿಂಗ್ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್
- ಈ ವಿದ್ಯಾರ್ಥಿಗಳ ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭಿಸಲು ಚಾಲನೆ
- ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಅರಿವು ಮೂಡಿಸಲು ತರಬೇತಿ ಕಾರ್ಯಗಾರ
- ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ
- ರಾಜ್ಯದಲ್ಲಿರುವ ಸಿಖ್ಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆ
- ಬೀದರ್’ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ
- ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post