ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೀವ್ರ ಜ್ವರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿಎಂ ಅಧಿಕೃತ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದೆ ಎಂದು ವರದಿಯಾಗಿದೆ.
ತೀವ್ರ ಜ್ವರದಿಂದ ಬಳಲಿದ್ದ ಸಿಎಂ ಪತ್ನಿ ಪಾರ್ವತಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರ ದೆಹಲಿ ಪ್ರವಾಸದ ಸಮಯದಲ್ಲಿ ಬದಲಾವಣೆಯಾಗಿದೆ.
ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ, ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ನಂತರ ಬೆಳಗ್ಗೆ 11.30 ಗೆ ಎಚ್’ಎಎಲ್ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ.
Also read: ಪತಿ-ಪತ್ನಿ ದೈಹಿಕ ಸಂಪರ್ಕ ನಿರಾಕರಿಸುವುದು ಐಪಿಸಿ ಅಡಿ ಕ್ರೌರ್ಯವೇ? ಕೋರ್ಟ್ ಹೇಳಿದ್ದೇನು?
ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ರಾಷ್ಟçಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ, ಕೇಂದ್ರ ಆಹಾರ ಖಾತೆ ಸಚಿವರು ಸೇರಿದಂತೆ ಹಲವು ಕೇಂದ್ರ ನಾಯಕರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಆನಂತರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿರುವ ಕರ್ನಾಟಕ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post