ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನಸಭೆಯಲ್ಲಿ ಇಂದು ಕಲಾಪ ನಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಕಳಚಿದ ಘಟನೆ ನಡೆದಿದೆ.
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ನಡೆಯುವ ವೇಳೆ ಸಿದ್ದರಾಮಯ್ಯ ಅವರ ಪಂಚೆ ಕಳಚಿದೆ. ಮಾತನಾಡುವ ಭರದಲ್ಲಿ ಅದು ಅವರ ಗಮನಕ್ಕೆ ಬಂದಿಲ್ಲ. ಆದರೆ, ಇದನ್ನು ಗಮನಿಸಿದ ಡಿ.ಕೆ. ಶಿವಕುಮಾರ್ ಅವರು, ಸಿದ್ದರಾಮಯ್ಯರ ಬಳಿಗೆ ಬಂದು ಪಂಚೆ ಸರಿಪಡಿಸಿಕೊಳ್ಳುವಂತೆ ಕಿವಿಯಲ್ಲಿ ಗುಟ್ಟಾಗಿ ಹೇಳಿದರು.
ಆನಂತರ ಪಂಚೆ ಸರಿಪಡಿಸಿಕೊಂಡು ಮಾತನಾಡಿದ ಸಿದ್ದರಾಮಯ್ಯ, ಕೊರೋನಾ ಬಂದ ನಂತರ ತೂಕ ಕೊಂಚ ಇಳಿದಿದೆ. ಹೀಗಾಗಿ, ಪಂಚೆ ಸಡಿಲವಾಗಿ ಕಳಚುತ್ತಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post