ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀ ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ 25ನೇ ವರ್ಷದ “ರಜತ ಮಹೋತ್ಸವ” ಹಾಗೂ ಶ್ರೀ ಪುರಂದರದಾಸರ ಆರಾಧನೆ ಪ್ರಯುಕ್ತ ಬನಶಂಕರಿಯ ಶ್ರೀ ದೇವಗಿರಿ ಶ್ರೀ ವೆಂಕಟರಮಣನ ಸನ್ನಿಧಿಯಲ್ಲಿ ಹಲವಾರು ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತಂಬಿಹಳ್ಳಿ ಮಾಧವತೀರ್ಥ ಮಠದ ಪರಮಪೂಜ್ಯ ಶ್ರೀ 108 ಶ್ರೀ ವಿದ್ಯಾಸಾಗರ ಮಾಧವತೀರ್ಥ ಶ್ರೀಪಾದರು ಮತ್ತು ಪರಮಪೂಜ್ಯ ಶ್ರೀ 108 ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರು ಶ್ರೀ ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ ಸಂಸ್ಥಾಪಕರಾದ ಗೌರಿ ನಾಗರಾಜ್ ಅವರ ನೇತೃತ್ವದಲ್ಲಿ ಗಣ್ಯರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನಂತರ ಶ್ರೀಗಳು ಫಲ ಮಂತ್ರಾಕ್ಷತೆಯೊಂದಿಗೆ ಆಶೀರ್ವದಿಸಿದರು.

Also read: Running of Special Trains Between Shivamogga and Banaras for Kumbh Mela
ಈ ಕಾರ್ಯಕ್ರಮಕ್ಕೆ ಸಾನಿಧ್ಯ ವಹಿಸಿದ್ದ ಪೂಜ್ಯ ಗುರುಗಳಿಗೆ ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಎನ್. ಸಂತೋಷ್ ಹೆಗಡೆ, ಡಾ. ಎಸ್. ರಂಗನಾಥ್, ಡಾ. ರಾಯಚೂರು ಶೇಷಗಿರಿದಾಸ್ ಹಾಗೂ ಜಿ.ಎಚ್. ಮದನ್ ಇವರಿಗೆ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷೆ ಬೆಳಗೆರೆ ಗೌರಿ ನಾಗರಾಜ್ ರವರು ಫಲ ಪುಷ್ಪಗಳೊಂದಿಗೆ ಗುರುಗಳಿಗೂ ಮತ್ತು ಎಲ್ಲಾ ಗಣ್ಯರಿಗೂ ಗೌರವ ಸಮರ್ಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post