ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಮಹಿಳಾ ಸ್ವಯಂ ಸೇವಾ ಸಂಸ್ಥೆ ನವ ಜ್ಞಾನ ಜ್ಯೋತಿ ಮಹಿಳಾ ಸಂಸ್ಥೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ನಿರಂತರವಾಗಿ ಕೆಲಸ ಮಾಡುತ್ತಿದೆ. ಸಂಘದ ಕಾರ್ಯದರ್ಶಿ ವಾಸಂತಿ ಹಾಗೂ ಅಧ್ಯಕ್ಷೆ ಶಾಂತಮ್ಮ ಅವರ ನೇತೃತ್ವದಲ್ಲಿ ಗ್ರಾಮೀಣ ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಬಡ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಿನ ಹಸ್ತ ಚಾಚಲಾಗುತ್ತಿದೆ.
ಕುರಿಸಾಕಾಣಿಕೆ, ಕೋಳಿ ಸಾಕಾಣಿಕೆ, ಟೈಲರಿಂಗ್ ತರಬೇತಿ, ಅಣಬೆ ಬೇಸಾಯ ಸೇರಿದಂತೆ ಬೇರೆ ಬೇರೆ ಸ್ವ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವ ತರಬೇತಿಯನ್ನು ಸ್ವಯಂ ಸೇವಾ ಸಂಸ್ಥೆ ನೀಡುತ್ತಿದೆ. ಅಲ್ಲದೆ, ಗ್ರಾಮೀಣ ಮಕ್ಕಳಿಗೆ ಉಚಿತ ಶಾಲಾ ಪರಿಕರಗಳು ಹಾಗೂ ಆಹಾರ ಧಾನ್ಯಗಳನ್ನು ಸಂಸ್ಥೆಯಿAದ ನೀಡುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನವ ಜ್ಞಾನ ಜ್ಯೋತಿ ಮಹಿಳಾ ಸಂಸ್ಥೆ ಕಳೆದ ೮ ವರ್ಷಗಳಿಂದ ನೀಡುತ್ತಾ ಬಂದಿದೆ.

ಸಂಘದ ಕೆಲ ಹಿಂದಿನ ಸದಸ್ಯೆಯರು ಈ ಅಪಪ್ರಚಾರದ ಹಿಂದೆ ಇದ್ದಾರೆ ಎಂದು ವಾಸಂತಿ ಹಾಗು ಶಾಂತಮ್ಮ ದೂರಿದ್ದಾರೆ. ತಮಗೆ ಮಾನಸಿಕ ಕಿರುಕುಳ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸಂಘದ ಸದಸ್ಯೆಯರಲ್ಲೇ ಅನಗತ್ಯ ಗೊಂದಲ ಸೃಷ್ಠಿಯಾಗುತ್ತಿರುವ ಕಾರಣದಿಂದ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡಿರುವುದಾಗಿ ಹಾಲಿ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.











Discussion about this post