ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ, ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ #SMKrishna ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ಬುಧವಾರ ಸರ್ಕಾರಿ ರಜೆ ಘೋಷಿಸಲಾಗಿದೆ.
ಈ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #D K Shivakumar ಮಾಧ್ಯಮಗಳಿಗೆ ಮಾತನಾಡಿದ್ದು, ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾರಚಣೆ ಘೋಷಣೆ ಮಾಡಲಾಗಿದೆ. ಬುಧವಾರ ರಾಜ್ಯದಾದ್ಯಂತ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ #Holiday for Schools and Colleges ಮಾಡಲಾಗಿದೆ ಎಂದಿದ್ದಾರೆ.
ಸರ್ಕಾರಿ ರಜೆ ಘೋಷಣೆ ಹಿನ್ನೆಲೆಯಲ್ಲಿ ನಾಳೆ ಬೆಳಗಾವಿ ಅಧಿವೇಶನದ ಕಲಾಪವೂ ಸಹ ರದ್ದಾಗಿದೆ ಎಂದು ವರದಿಯಾಗಿದೆ.
ಕೃಷ್ಣ ಅವರ ಹುಟ್ಟೂರಿನಲ್ಲಿ ನಾಳೆ ಒಕ್ಕಲಿಗ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದ್ದು, ಇಂದು ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Also read: ಎಸ್.ಎಂ. ಕೃಷ್ಣ | ಆಧುನಿಕ ಬೆಂಗಳೂರಿನ ನಿರ್ಮಾತೃ, ಸಿಲಿಕಾನ್ ಸಿಟಿಯ ಕೃರ್ತೃ, ಸಭ್ಯ ರಾಜಕಾರಣದ ಮಾದರಿ
ಎಸ್.ಎಂ. ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣ ಅವರು ಇತ್ತೀಚಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಸಹ ಪಡೆದುಕೊಂಡಿದ್ದರು. ಚೇತರಿಸಿಕೊಳ್ಳದ ಹಿನ್ನೆಲೆ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 2.30 ರ ಹೊತ್ತಿಗೆ ವಿಧಿವಶರಾದರು ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.
ಕೃಷ್ಣ ಅವರು 1999 ರಿಂದ 2004 ರವರೆಗೆ ಕರ್ನಾಟಕದ 10ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜಕೀಯ ಜೀವನದಲ್ಲಿ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 2023ರಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಸದಾಶಿನಗರದ ನಿವಾಸದಲ್ಲಿ ಬುಧವಾರ ಬೆಳಗ್ಗೆ 8 ಗಂಟೆವರೆಗೆ ಎಸ್. ಎಂ. ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಮಂಡ್ಯ ಜಿಲ್ಲೆಯ ಸ್ವಗ್ರಾಮ ಸೋಮನಹಳ್ಳಿಗೆ ಪಾರ್ಥೀವ ಶರೀರದ ರವಾನೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬುಧವಾರ ಮದ್ಯಾಹ್ನ 3 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುತ್ತದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post