ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೆಹರೂ-ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ನುಡಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ 139 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

Also read: ಹಿಂದೂ ಬೇರೆ-ಹಿಂದುತ್ವವೇ ಬೇರೆ, ನಾವು ರಾಮನನ್ನು ಪೂಜಿಸಲ್ವಾ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿ. ಬ್ರಿಟಿಷರನ್ನು ಅಹಿಂಸೆ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು ಎಂದು ವಿವರಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್)










Discussion about this post