ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜೆಪಿ ನಗರದ ಸಿಲಿಕಾನ್ ಸಿಟಿ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಕಾಮರ್ಸ್ ಸಭಾಂಗಣದಲ್ಲಿ ಡಿ.19ರ ಮಧ್ಯಾಹ್ನ 2 ಗಂಟೆಗೆ ಮಹಾತ್ಮ ಗಾಂಧೀಜಿ ಮತ್ತು ಶಿಕ್ಷಣ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರ್ವೋದಯ ಮಂಡಲ ಮತ್ತು ಸಿಲಿಕಾನ್ ಸಿಟಿ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಕಾಮರ್ಸ್ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಿಲಿಕಾನ್ ಸಿಡಿ ಎಜುಕೇಷನಲ್ ಅಕಾಡೆಮಿ ಅಧ್ಯಕ್ಷ ಡಾ. ಕೆ.ಎಸ್. ಸಮೀರಸಿಂಹ ಉದ್ಘಾಟಿಸಲಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಸಿ.ವಿ. ತಿರುಮಲ ರಾವ್ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದು, ಅಕಾಡೆಮಿ ಕಾರ್ಯದರ್ಶಿ ಎಲ್. ರವಿ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.
Also read: ಡಿ.19-24ರವರೆಗೆ ಪಿಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕೀರ್ತಿ ಬದಿಯಡ್ಕ, ರಾಸೇಯೋ ಕಾರ್ಯಕ್ರಮ ಅಧಿಕಾರಿ ಎನ್.ಎಸ್. ಮದನ್ ಉಪಸ್ಥಿತರಿರಲಿದ್ದಾರೆ ಎಂದು ಕರ್ನಾಟಕ ಸರ್ವೋದಯ ಮಂಡಲ ಅಧ್ಯಕ್ಷ ಗುರುರಾಜ ಪೋಶೆಟ್ಟಿಹಳ್ಳಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post