ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ರಾಯರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು, ಅನ್ನದಾನ ಸೇವೆ ಜರುಗಿದವು.
ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ #Subudhendra Thirtha Shri ಆದೇಶದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ ತೊಟ್ಟಿಲು ಸೇವೆ ಮಹಾಮಂಗಳಾರತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Also read: ಉತ್ತಮ ಆರೋಗ್ಯಕ್ಕಾಗಿ ಈ ಮೂರು ಸೂತ್ರಗಳನ್ನು ಪಾಲಿಸಿ | ಡಾ. ಧನಂಜಯ ಸರ್ಜಿ ಸಲಹೆ
ಸಂಸ್ಥೆಯ ವಿದುಷಿ ಗೀತಾ ಅನಂತನಾರಾಯಣನ್ ಅವರ ನಿರ್ದೇಶನದಲ್ಲಿ ಗೀತಾಂಜಲಿ ಸ್ಕೂಲ್ ಆಫ್ ನಾಟ್ಯಂ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post