ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮತ್ತೊಂದು ವಿಶೇಷ ರೈಲು ಸಂಚಾರಿಸಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಏ.10 ರಂದು ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗ ರೈಲು ನಿಲ್ದಾಣವನ್ನು ಬಿಡಲಿರುವ 06512 ಕ್ರಮ ಸಂಖ್ಯೆಯ ಈ ವಿಶೇಷ ರೈಲು ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು ಸಂಪಿಗೆ ರಸ್ತೆ, ತುಮಕೂರು ಮೂಲಕ ಮಧ್ಯಹ್ನ 3:30ಕ್ಕೆ ಯಶವಂತಪುರ ತಲುಪಲಿದೆ. ಯಶವಂತಪುರದಿಂದ ಕ್ರಾಂತಿ ವೀರ ಸಂಗೊಳ್ಳಿರಾಯಣ್ಣ ಬೆಂಗಳೂರು ರೈಲು ನಿಲ್ದಾಣಕ್ಕೆ ಸಂಜೆ 4:15 ಕ್ಕೆ ತಲುಪಲಿದೆ.
ಈ ರೈಲಿನಲ್ಲಿ ಸಂಚರಿಸಲಿಚ್ಛಿಸುವ ಪ್ರಯಾಣಿಕರು ಆನ್‌ಲೈನ್ ಮೂಲಕ ಟಿಕೆಟ್ ಪಡೆದುಕೊಳ್ಳಬೇಕಿದೆ. ಈ ರೈಲಿನ ಸಂಚಾರ ತಾತ್ಕಾಲಿಕವಾಗಿದ್ದು, ಯುಗಾದಿ ಹಬ್ಬ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚರಿಸುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post