ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಂಬರುವ ದಸರಾ ಹಬ್ಬದ #Dasara Festival ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು #SouthWestern Railway ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳನ್ನು #Bangalore-Belgaum-Mysore Special Train ಓಡಿಸಲಿದೆ. ರೈಲುಗಳ ವಿವರ ಹೀಗಿದೆ:
ರೈಲು ಸಂಖ್ಯೆ 06271/06272 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಮೈಸೂರು ಎಕ್ಸ್ ಪ್ರೆಸ್ ವಿಶೇಷ ರೈಲು (1 ಟ್ರಿಪ್):
- ರೈಲು ಸಂಖ್ಯೆ 06271 ಸೆಪ್ಟೆಂಬರ್ 30, 2025 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
- ರೈಲು ಸಂಖ್ಯೆ 06272 ಅಕ್ಟೋಬರ್ 1, 2025 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ರೈಲು ಸಂಖ್ಯೆ 06273/06274 ಮೈಸೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು (1 ಟ್ರಿಪ್):
- ರೈಲು ಸಂಖ್ಯೆ 06273 ಅಕ್ಟೋಬರ್ 2, 2025 ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
- ರೈಲು ಸಂಖ್ಯೆ 06274 ಅಕ್ಟೋಬರ್ 3, 2025 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ರೈಲು ಸಂಖ್ಯೆ 06275/06276 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್):
- ರೈಲು ಸಂಖ್ಯೆ 06275 ಅಕ್ಟೋಬರ್ 4, 2025 ರಂದು ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.
- ರೈಲು ಸಂಖ್ಯೆ 06276 ಅಕ್ಟೋಬರ್ 5, 2025 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ತಲುಪಲಿದೆ.
ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಮೇಲೆ ತಿಳಿಸಿದ ಎಲ್ಲಾ ರೈಲುಗಳು (06271/06272, 06273/06274 ಮತ್ತು 06275/06276) ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.
ಹಬ್ಬದ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳುಬೇಕು, ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್’ಸೈಟ್ ಗೆ ಭೇಟಿ ನೀಡಬಹುದು, ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post