No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಟ್ರಸ್ಟ್‌ವೆಲ್ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ವಿಶೇಷ ಚಿಕಿತ್ಸಾ ವಿಭಾಗ ಪ್ರಾರಂಭ

ಕೊರೋನಾದಿಂದ ಗುಣರಾದ ನಂತರ ನಿಮಗೆ ಈ ದೈಹಿಕ ತೊಂದರೆ ಕಂಡರೆ ತತಕ್ಷಣ ವೈದ್ಯರನ್ನು ಸಂಪರ್ಕಿಸಿ

kalpa News by kalpa News
May 12, 2021
in ಬೆಂಗಳೂರು ನಗರ
0
ಟ್ರಸ್ಟ್‌ವೆಲ್ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ವಿಶೇಷ ಚಿಕಿತ್ಸಾ ವಿಭಾಗ ಪ್ರಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡಿರುವವರ ಮೇಲೆ ಡೆಡ್ಲಿ ಬ್ಲಾಕ್ ಫಂಗಸ್ – ಮ್ಯುಕೋರ್‌ಮಯೋಸಿಸ್ ಅಟ್ಯಾಕ್ ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಹೆಚ್ಚಾಗಿ ಕಂಡುಬಂದಿದ್ದ ಈ ಫಂಗಸ್ ಸೋಂಕು ಈಗ ಬೆಂಗಳೂರಿನಲ್ಲೂ ಕೊರೋನಾ ಮಹಾಮಾರಿಯಿಂದ ಚೇತರಿಸಿಕೊಂಡಿರುವವರ ಮೇಲೆ ತನ್ನ ಪ್ರಭಾವ ತೋರಿಸುತ್ತಿದೆ.
ಬೆಂಗಳೂರಿನಲ್ಲಿರುವ ಟ್ರಸ್ಟ್‌ ವೆಲ್ ಆಸ್ಪತ್ರೆಯಲ್ಲಿ ಕಳೆದ 2 ವಾರಗಳಲ್ಲಿ 38 ಜನರಿಗೆ ಈ ಬ್ಲಾಕ್ ಫಂಗಸ್ ನ ಸೋಂಕಿಗೆ ಚಿಕಿತ್ಸೆಯನ್ನು ನೀಡಲಾಗಿದೆ. ಇದುವರೆಗೂ ರಾಜ್ಯದಲ್ಲಿ ಒಂದೇ ಆಸ್ಪತ್ರೆಯಲ್ಲಿ ಇಷ್ಟು ಪ್ರಮಾಣದ ರೋಗಿಗಳಿಗೆ ಚಿಕಿತ್ಸೆ ನೀಡಿರುವುದು ಬಹುಶಃ ಇದು ಒಂದೇ ಆಸ್ಪತ್ರೆಯಲ್ಲಿ ಎಂದರೆ ತಪ್ಪಾಗಲಾರದು.

ಸೋಂಕಿತರಿಗೆ ವಿಶೇಷ ಕಾಳಜಿಯನ್ನು ಹಾಗೂ ಆರೈಕೆಯನ್ನು ನೀಡುವ ಉದ್ದೇಶದಿಂದ ಟ್ರಸ್ಟ್‌ ವೆಲ್ ಆಸ್ಪತ್ರೆಯಲ್ಲಿ ವಿಶೇಷ ವಿಭಾಗವನ್ನು ಪ್ರಾರಂಭಿಸಲಾಗಿದೆ. ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುವ ಸಂಧರ್ಭದಲ್ಲಿ ಸ್ಟಿರಾಯ್ಡ್‌ನ ಬಳಕೆ ಮಾಡಲಾಗುತ್ತಿದೆ. ಇದು ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಆದರೆ, ಹೆಚ್ಚು ಮಧುಮೇಹ ಹೊಂದಿರುವ ರೋಗಿಗಳಲ್ಲಿ ಸ್ಟಿರಾಯ್ಡ್‌ ಬಳಕೆಯಿಂದ ಸಕ್ಕರೆ ಅಂಶ ಹೆಚ್ಚಾಗುವುದರಿಂದ ಫಂಗಲ್ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ಕೆಲವು ಸಂಧರ್ಭಗಳಲ್ಲಿ ಸ್ಟಿರಾಯ್ಡ್‌ ಹಾಗೂ ಹೆಚ್ಚು ಶಕ್ತಿಯ ಆಂಟಿಬಯಾಟಿಕ್‌ಗಳನ್ನು ನೀಡಲಾಗುತ್ತಿದೆ. ಇದರ ದುಷ್ಪರಿಣಾಮದಿಂದಾಗಿ ಕೆಲವು ರೋಗಿಗಳಲ್ಲಿ ರೋಗನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. ಆಗ, ಈ ಬ್ಲಾಕ್ ಫಂಗಸ್ ಅಥವಾ ಮ್ಯುಕೋರ್‌ಮಯೋಸಿಸ್ ಆಕ್ರಮಣ ಮಾಡಿ ಹಲವಾರು ತೊಂದರೆಗಳಿಗೆ ರೋಗಿಗಳನ್ನು ಸಿಲುಕಿಸುತ್ತದೆ.

ಟ್ರಸ್ಟ್‌ ವೆಲ್ ಆಸ್ಪತ್ರೆಯ ಮ್ಯುಕೋರ್‌ಮಯೋಸಿಸ್ ವಿಶೇಷ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ದೀಪಕ್ ಹಲ್ದೀಪುರ್ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ರೋಗಿಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಕುಂದಿಸುತ್ತದೆ. ಕೊರೋನಾ ಪ್ರಕರಣಗಳಲ್ಲಿ ಪ್ರಾಣ ಉಳಿಸುವ ಸ್ಟಿರಾಯ್ಡ್‌ಗಳನ್ನು ವೈದ್ಯರ ಸಲಹೆ ಇಲ್ಲದೆ ತಪ್ಪು ಬಳಕೆಯಿಂದ ಮಧುಮೇಹ ರೋಗಿಗಳಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ. ಅಲ್ಲದೆ, ರೋಗ ನಿರೋಧಕ ಶಕ್ತಿಯನ್ನು ಕಡಿಮೆಗೊಳಿಸಿದ ಸಂಧರ್ಭದಲ್ಲಿ ಈ ಫಂಗಸ್ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತದೆ. ಆಕ್ಸಿಜನ್ ಹ್ಯೂಮಿಡಿಫೈರ್ ನಲ್ಲಿ ಬಳಸುವ ನೀರನ್ನು ಸ್ಟೆರಲೈಸ್ ಮಾಡದೇ ಇದ್ದ ಸಂಧರ್ಭದಲ್ಲೂ ಈ ಫಂಗಸ್ ರೋಗಿಗೆ ಬರುವ ಸಾಧ್ಯತೆ ಇರುತ್ತದೆ.

ಕೋವಿಡ್ ಸೋಂಕಿನಿಂದ ಗುಣುಮುಖರಾದ ಮೇಲೂ ಈ ಲಕ್ಷಣಗಳು ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು.
1. ಮುಖದ ಒಂದೇ ಭಾಗದಲ್ಲಿ ನೋವು ಕಂಡುಬಂದರೆ
2. ಕಣ್ಣುಗಳಲ್ಲಿ ಊತ/ನೋವು ಕಂಡುಬಂದರೆ
3. ಮೂಗಿನಲ್ಲಿ ಗಾಳಿಯಾಡದಿರುವಿಕೆ
4. ಮೂಗಿನಲ್ಲಿ ರಕ್ತ ಸೋರಿಕೆ
5. ಹಲ್ಲುಗಳು ಸಡಿಲಗೊಳ್ಳುವುದು
6. ಬಾಯಿಯ ಮೇಲ್ಭಾಗದಲ್ಲಿ ಕಪ್ಪು ಅಥವಾ ಕಂದುಬಣ್ಣದ ಕಂಡುಬಂದರೆ
7. ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಕಂಡುಬಂದರೆ

ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಹಾಗೂ ಬ್ಯಾಕ್ ಫಂಗಸ್ ಅಥವಾ ಮ್ಯುಕೋರ್‌ಮಯೋಸಿಸ್ ನ ಸೋಂಕು ಇಲ್ಲದೇ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಖ್ಯಾತ ವೈದ್ಯರಾದ ದೀಫಕ್ ಹಲ್ದೀಪುರ್ ತಿಳಿಸಿದರು.

ಡಾ.ಎಚ್.ವಿ. ಮಧುಸೂಧನ್ ಮಾತನಾಡಿ, ಕಳೆದ ಎರಡು ವಾರದಲ್ಲಿ ಟ್ರಸ್ಟ್‌ ವೆಲ್ ಆಸ್ಪತ್ರೆಯಲ್ಲಿ 15 ಕ್ಕೂ ಹೆಚ್ಚು ಬ್ಯಾಕ್ ಫಂಗಸ್ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದೆ. ಇದೊಂದು ಸೈಲೆಂಟ್ ಕಿಲ್ಲರ್ ಸೋಂಕು ಆಗಿದ್ದು, ಕೊರೋನಾ ಮೊದಲ ಅಲೆಯಲ್ಲಿ ಕೇವಲ 33 ರೋಗಿಗಳಿಗೆ ಚಿಕಿತ್ಸೆ ನೀಡಿದ್ದೆವು. ಆದರೆ, ಈ ಬಾರಿ ಕೇವಲ 2 ವಾರದಲ್ಲಿ 38 ಜನರಿಗೆ ಸೋಂಕು ತಗುಲಿರುವುದು ಬಹಳ ಆತಂಕಕಾರಿ ವಿಷಯವಾಗಿದೆ. ಕೊರೋನಾ ಚಿಕಿತ್ಸೆ ಪಡೆದುಕೊಂಡು ಗುಣಮುಖರಾದವರು ಅದರಲ್ಲೂ ಮಧುಮೇಹ ರೋಗದಿಂದ ಬಳುತ್ತಿರುವವರು ಬಹಳ ಹುಷಾರಾಗಿ ಇರಬೇಕು ಎಂದು ಅವರು ಸಲಹೆ ನೀಡಿದರು.

ವಿಶೇಷ ಚಿಕಿತ್ಸಾ ವಿಭಾಗ:
ಈ ಫಂಗಸ್ ಸೋಂಕು ಬಹು ಬೇಗ ಬೇರೆಯವರಿಗೆ ಹರಡುತ್ತದೆ. ಅದರಲ್ಲೂ ಇದಕ್ಕೆ ಚಿಕಿತ್ಸೆ ನೀಡುವ ವೈದ್ಯರಿಗೂ ಸೋಂಕಿನ ಭೀತಿ ತಪ್ಪಿದ್ದಲ್ಲ. ಆದ್ದರಿಂದ ಇದರ ಚಿಕಿತ್ಸೆಗಾಗಿ ಟ್ರಸ್ಟ್‌ ವೆಲ್ ಆಸ್ಪತ್ರೆಯಲ್ಲಿ ವಿಶೇಷ ವಿಭಾಗವನ್ನು ರಚಿಸಲಾಗಿದೆ. ಈ ತಂಡದಲ್ಲಿ ಇಎನ್‌ಟಿ ವಿಭಾಗದ ನಿರ್ದೇಶಕರಾದ ಡಾ ದೀಪಕ್ ಹಲ್ದೀಪುರ್, ನ್ಯೂರಸೈನ್ಸಸ್ ವಿಭಾಗದ ನಿರ್ದೇಶಕರಾದ ಡಾ. ಎಚ್.ವಿ. ಮಧುಸೂಧನ್, ಮ್ಯಾಕ್ಸಿಲಲೋಫೇಶಿಯಲ್ ತಜ್ಞರಾದ ಡಾ ಆದಿತ್ಯ ಮೂರ್ತಿ, ಕಣ್ಣಿನ ತಜ್ಞರಾದ ಡಾ ಪ್ರೀತಿ ಕಾಳೆ ಇದ್ದಾರೆ. ಇದುವರೆಗೂ 24 ರೋಗಿಗಳಿಗೆ ಚಿಕಿತ್ಸೆಯನ್ನು ನೀಡಲಾಗಿದೆ.

ಈ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸುವ ಅಗತ್ಯತೆ ಹೆಚ್ಚಾಗಿದೆ. ಮೇಲ್ಕಂಡ ಲಕ್ಷಣಗಳು ಕಂಡು ಬಂದಲ್ಲಿ ತಡಮಾಡದೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCorona 2nd WaveCovidKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaTrust Well Hospitalಕೊರೋನಾ ಎರಡನೇ ಅಲೆಕೋವಿಡ್ಟ್ರಸ್ಟ್ ವೆಲ್ ಆಸ್ಪತ್ರೆಬೆಂಗಳೂರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ವಾರಕ್ಕೆ ನಾಲ್ಕು ದಿನ ಫುಲ್ ಲಾಕ್ ಡೌನ್: ಜಿಲ್ಲಾಧಿಕಾರಿಗಳು ಹೇಳಿದ್ದೇನು?

Next Post

ಕೋವಿಡ್‌ನಿಂದ ವಿನೋದ್ ಸವದಿ ನಿಧನ

kalpa News

kalpa News

Next Post
ಕೋವಿಡ್‌ನಿಂದ ವಿನೋದ್ ಸವದಿ ನಿಧನ

ಕೋವಿಡ್‌ನಿಂದ ವಿನೋದ್ ಸವದಿ ನಿಧನ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL