ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೌಲ್ಯ ಮಾಪನ ಪ್ರಕ್ರಿಯೆ ಮುಗಿದಿದ್ದು, ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ SSLC Exam Result ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Mninister Nagesh ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲು ಸಾಲು ರಜೆಗಳು ಬಂದ ಕಾರಣ, ಮೌಲ್ಯಮಾಪನ ಕೊಂಚ ವಿಳಂಬವಾಗಿತ್ತು. ಪ್ರಸ್ತುತ ಮೌಲ್ಯ ಮಾಪನ ಪ್ರಕ್ರಿಯೆ ಮುಗಿದಿದ್ದು, ಮೌಲ್ಯ ಮಾಪನದಲ್ಲಿ ಸಣ್ಣಪುಟ್ಟ ಕೆಲವು ದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ, ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
Also read : ಬಂಗಾರೇಶ್ ಬದುಕನ್ನು ಹಸನುಗೊಳಿಸಿದ ಅಡಿಕೆ ಸಂಸ್ಕರಣಾ ಘಟಕ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post