No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಸ್ಒಪಿ ಆಧಾರದಲ್ಲಿ, ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಡಿಡಿಪಿಐಗಳೊಂದಿಗೆ ಶಿಕ್ಷಣ ಸಚಿವರ ವಿಡಿಯೋ ಕಾನ್ಫೆರೆನ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 10, 2021
in ಬೆಂಗಳೂರು ನಗರ
0
ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಂದಿನ ವ್ಯಾಸಂಗಕ್ಕಾಗಿ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳುವ ಅವಕಾಶ ದೊರಕಿಸಿಕೊಡಬೇಕೆನ್ನುವ ಮಹತ್ವದ ದೃಷ್ಟಿಯಿಂದ ನಡೆಸಲಾಗುತ್ತಿರುವ  ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಕುರಿತು ಮಕ್ಕಳು ಮತ್ತು ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು  ಪ್ರೌಢಶಿಕ್ಷಣ  ಸಚಿವ ಎಸ್. ಸುರೇಶ್ ಕುಮಾರ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಕುರಿತು ರಾಜ್ಯದ ಎಲ್ಲ 34 ಶೈಕ್ಷಣಿಕ ಜಿಲ್ಲೆಗಳ   ಉಪನಿರ್ದೇಶಕರು, ಬಿಇಒ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್  ಮೂಲಕ ಮಾರ್ಗದರ್ಶನ ನೀಡಿದ ಅವರು, ಈ ಬಾರಿಯ ಬದಲಾಗಿರುವ ಪರೀಕ್ಷೆ ಪದ್ಧತಿ ಕುರಿತು ಮಕ್ಕಳಿಗೆ ಶಿಕ್ಷಕರು ಸೂಕ್ತ ತಿಳಿವಳಿಕೆ ನೀಡಲು ಕ್ರಮ ವಹಿಸಬೇಕೆಂದರು.

ಎಲ್ಲದಕ್ಕಿಂತ ಮುಖ್ಯವಾಗಿ ಈ ಪರೀಕ್ಷೆಗಳನ್ನು ಕೋವಿಡ್-19 ಸೋಂಕು ತಹಬಂದಿಗೆ ಬಂದ ನಂತರವೇ ನಡೆಸಲಾಗುವುದು ಎಂಬ ಭರವಸೆಯನ್ನು ಮಕ್ಕಳು ಮತ್ತು ಪೋಷಕರಲ್ಲಿ ಮೂಡಿಸಬೇಕು ಎಂದು ಸಚಿವರು ಹೇಳಿದರು.

ಈ ವಾರಂತ್ಯಕ್ಕೆ ಮಾದರಿ ಪ್ರಶ್ನೆ ಪತ್ರಿಕೆಗಳು ಎಲ್ಲ ಶಾಲೆಗಳಿಗೆ ಆಯಾ ಬಿಇಒ ಕಚೇರಿಗಳ ಮೂಲಕ ತಲುಪಲಿವೆ. ಮಕ್ಕಳಿಗೆ ಓಎಂಆರ್ ಶೀಟ್ ರೂಪದಲ್ಲಿರುವ ಪ್ರಶ್ನೆ ಪತ್ರಿಕೆಗಳಿಗೆ ಹೇಗೆ ಉತ್ತರಿಸಬೇಕೆಂಬ ಕುರಿತು ಶಿಕ್ಷಕರು ಸಲಹೆ ನೀಡಬೇಕು. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಅಧಿಕಾರಿಗಳು ಮತ್ತು ಶಿಕ್ಷಕರು ವಿವಿಧ ರೀತಿಯಲ್ಲಿ ಮಕ್ಕಳನ್ನು ತಲುಪಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ಪರೀಕ್ಷೆಗೆ ಸಜ್ಜುಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಉಪಯುಕ್ತ ಮತ್ತು ಉತ್ತಮ ನಡೆಯನ್ನು ಉಳಿದ ಜಿಲ್ಲೆಗಳೂ ಅನುಸರಿಸಬೇಕೆಂದು  ಸುರೇಶ್ ಕುಮಾರ್ ಹೇಳಿದರು.

ಮುಂದಿನ ವ್ಯಾಸಂಗವನ್ನು ಆಯ್ದುಕೊಳ್ಳುವ ನಿಟ್ಟಿನಲ್ಲಿ ಈ ಪರೀಕ್ಷೆಯು ದಿಕ್ಸೂಚಿಯಾಗಿರುವುದರಿಂದ  ಪರೀಕ್ಷೆಯಲ್ಲಿ ತಲಾ ಒಂದು ವಿಷಯಕ್ಕೆ ತಲಾ 40 ಅಂಕದ ಪ್ರಶ್ನೆಪತ್ರಿಕೆಯಿದ್ದು, ಅದರಲ್ಲೇ ನಾಲ್ಕು ಉತ್ತರಗಳಲ್ಲಿ ಒಂದು ಉತ್ತರವನ್ನ ಗುರುತು ಮಾಡುವಂತಹ ಪ್ರಕ್ರಿಯೆ ಚಾಲ್ತಿಯಲ್ಲಿರಲಿದೆ. ಪ್ರಶ್ನೆಗಳು ನೇರ ಮತ್ತು ಸುಲಭವಾಗಿರುವುದರಿಂದ ಮಕ್ಕಳಿಗೆ ಹೆಚ್ಚಿನ ಗೊಂದಲವಾಗುವುದಿಲ್ಲ. ಆದರೂ ಈ ಕುರಿತು ಮಕ್ಕಳಿಗೆ ಸುಲಭವಾಗಿ ಅರ್ಥೈಸುವಂತೆ ಮಾಹಿತಿ ನೀಡಿ, ಈ ಹೊಸ ಪದ್ಧತಿ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಕ್ರಮ ವಹಿಸಬೇಕಾದ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ಹಲವಾರು ಸ್ತರದ ಜನರೊಂದಿಗೆ ಹಲವಾರು ಸುತ್ತಿನ ಚರ್ಚೆಗಳ ನಂತರ ಮಕ್ಕಳ ಹಿತದೃಷ್ಟಿಯಿಂದ ಕೇವಲ ಎರಡು ದಿನಗಳ ಪರೀಕ್ಷೆ ನಡೆಸಲಾಗುತ್ತಿದೆ. ಕಳೆದ ಬಾರಿಗಿಂತ ಹೆಚ್ಚಿನ ಸುರಕ್ಷತಾ ವಾತಾವರಣದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಅದಕ್ಕಾಗಿ ಇಲಾಖೆ ಈಗಾಗಲೇ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಮಕ್ಕಳ ಹಿತದೃಷ್ಟಿಯಿಂದ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗುತ್ತಿದ್ದು, ಕೋವಿಡ್-19ರ ಲಸಿಕೆ ಪಡೆದ ಶಿಕ್ಷಕರನ್ನೇ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಿಕೊಳ್ಳಬೇಕಾಗಿರುವುದರಿಂದ ಶಿಕ್ಷಕರಿಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ಈಗಾಗಲೇ ಆರೋಗ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.  ಈ ಬಗ್ಗೆ ಕಲಬುರಗಿ, ಧಾರವಾಡ ಅಪರ ಆಯುಕ್ತರು ವಿಶೇಷ ಗಮನ ಹರಿಸಿ ಲಸಿಕೆ ಪಡೆದ ಶಿಕ್ಷಕರನ್ನೇ ಮೇಲ್ವಿಚಾರಕರನ್ನಾಗಿ‌ ನೇಮಿಸಬೇಕೆಂದು ಸುರೇಶ್ ಕುಮಾರ್ ಸೂಚಿಸಿದರು.

ಕಳೆದ ವರ್ಷದಂತೆ ಸ್ಥಳೀಯ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿನಿಧಿಗಳು ಸಮವಸ್ತ್ರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ಮಕ್ಕಳ ಸುರಕ್ಷತೆಗೆ ಮಾರ್ಗದರ್ಶನ ನೀಡಲಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಮಕ್ಕಳು ತಮ್ಮ ವಾಸಸ್ಥಳದ ಸನಿಹದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಕಳೆದ ಬಾರಿಗಿಂತ ಈ ಬಾರಿ 30 ಸಾವಿರ ಮಕ್ಕಳು ಹೆಚ್ಚಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ಯಶಸ್ಸಿಗಾಗಿ ಕಳೆದ ಬಾರಿಯಂತೆ ಎಲ್ಲ ಇಲಾಖೆಗಳೂ ಸಹಕಾರ ನೀಡಲಿವೆ. ಈ ಕುರಿತಂತೆ ವಾರದೊಳಗೆ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಆಯುಕ್ತರು/ನಿರ್ದೇಶಕರ ಸಭೆ ನಡೆಸಲಾಗುವುದು ಹಾಗೆಯೇ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡೀಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಪರೀಕ್ಷೆಗೆ ಹಾಜರಾಗಲಿರುವ ಎಲ್ಲ ಮಕ್ಕಳಿಗೂ ಎನ್-95 ಮಾಸ್ಕ್‌ಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತದೆ. ಮಕ್ಕಳ  ಹಿತದೃಷ್ಟಿಯಿಂದಲೇ ನಡೆಯುತ್ತಿರುವ ಈ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಪರೀಕ್ಷೆಯೊಳಗೆ ಎಲ್ಲ ಜಿಲ್ಲೆಗಳಿಗೆ ಭೇಟಿ  ನೀಡಿ ಪರೀಕ್ಷಾ ಸಿದ್ಧತೆ ಪರಿಶೀಲಿಸಲು  ಖುದ್ದಾಗಿ ಭೇಟಿ ನೀಡುವ ಕುರಿತೂ ಚಿಂತನೆ ನಡೆಸಿದ್ದೇನೆ ಎಂದೂ ಸುರೇಶ್ ಕುಮಾರ್ ಹೇಳಿದರು.

ಪರೀಕ್ಷೆ ಕುರಿತಂತೆ  ಮಕ್ಕಳು ಮತ್ತು  ಪೋಷಕರಲ್ಲಿ  ಸದಭಿಪ್ರಾಯವಿದ್ದು,  ಪರೀಕ್ಷೆ ಬರೆಯುವ ಕುರಿತು ಮಕ್ಕಳು ಆತ್ಮಸ್ಥೈರ್ಯದಿಂದ ಇದ್ದಾರೆ ಎಂದು ಡಿಡಿಪಿಐಗಳು ಸಚಿವರೊಂದಿಗೆ ಅನಿಸಿಕೆಗಳನ್ನು ಹಂಚಿಕೊಂಡರು. ತಮ್ಮ ತಮ್ಮ ಜಿಲ್ಲೆಗಳಲ್ಲಿ ಪರೀಕ್ಷೆ ಕುರಿತು ಕೈಗೊಳ್ಳಲಾಗಿರುವ ಮತ್ತು ಮಕ್ಕಳಿಗೆ ಹೊಸ ಪರೀಕ್ಷಾ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ಕುರಿತು ಮಾರ್ಗದರ್ಶನ ನೀಡಲು ಶಾಲಾ ಹಂತದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ತಾವು ಈಗಾಗಲೇ ಡಿಸಿ ಮತ್ತು ಸಿಇಒಗಳನ್ನು ಭೇಟಿ ಮಾಡಿದ್ದು, ಅವರೆಲ್ಲ ಪರೀಕ್ಷೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆಂದು  ಡಿಡಿಪಿಐಗಳು ಸಚಿವರ ಗಮನಕ್ಕೆ ತಂದರು.

ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ತಮ್ಮ ಜಿಲ್ಲೆಯಲ್ಲಿ ಪರೀಕ್ಷೆಗಳನ್ನು ಯಶಸ್ವಿಗೊಳಿಸುವ ಸಂಬಂಧದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಅವರಿಂದ ಎಲ್ಲ ರೀತಿಯ ಸಹಕಾರ ಪಡೆಯಬೇಕೆಂದು ಸೂಚನೆ ನೀಡಿದರು.

ಕಳೆದ ಬಾರಿಯ ಎಸ್ಒಪಿ ಕುರಿತು ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದವು. ಈ ಬಾರಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅದಕ್ಕಿಂತ ಸುಧಾರಿತ ಎಸ್ಒಪಿ ನೀಡಲಿದ್ದು, ಅದೇ ಪ್ರಕಾರವೇ ಪರೀಕ್ಷೆಗಳು ಸುರಕ್ಷತಾ ಪರಿಸರದಲ್ಲಿ ನಡೆಯಲಿರುವುದರಿಂದ ಯಾರೂ ಆತಂಕಕ್ಕೊಳಗಾಗುವ ಪ್ರಮೇಯವೇ ಇಲ್ಲ ಎಂದು ಸುರೇಶ್ ಕುಮಾರ್ ಹೇಳಿದರು.

ಶಾಲೆಗಳು ಆರಂಭವಾದ ನಂತರ ಪ್ರತಿದಿನವೂ ನಾಲ್ಕೈದು ಮಕ್ಕಳನ್ನು ಶಾಲೆಗಳಿಗೆ ಕರೆಸಿ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಲೂ ಕ್ರಮ ವಹಿಸಬಹುದೆಂದೂ ಸಚಿವರು ಸಲಹೆ ನೀಡಿದರು.

ಮಕ್ಕಳು ಪರೀಕ್ಷಾ ಕೇಂದ್ರ ಪ್ರವೇಶಿಸಿದ ತಕ್ಷಣವೇ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಮತ್ತು ಆತ್ಮಸ್ಥೈರ್ಯ ಹೆಚ್ಚಿಸುವಂತಹ ಭಿತ್ತಿಪತ್ರಗಳಿರುತ್ತವೆ. ಸ್ಥಳೀಯ ಮಟ್ಟದಲ್ಲೂ ಇಂತಹ ಇನ್ನೂ ಅನೇಕ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ಕ್ರಮ ವಹಿಸಲು ಅವಕಾಶವಿದೆ ಎಂದೂ ಸಚಿವರು ಹೇಳಿದರು.

ಪರೀಕ್ಷೆಯ ಸಂಪೂರ್ಣ ಯಶಸ್ಸಿಗೆ ಕಳೆದ ಬಾರಿಯಂತೆ ಈ ವರ್ಷವೂ ಅಧಿಕಾರಿಗಳು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು ಹೆಚ್ಚಿನ ಸಹಕಾರ ನೀಡಬೇಕೆಂದು ಸಚಿವರು ಕೋರಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್, ಅಪರ ಆಯುಕ್ತರಾದ ನಳಿನ್ ಅತುಲ್ (ಕಲಬುರಗಿ) ಮೇಜರ್ ಸಿದ್ದಲಿಂಗಯ್ಯ ಹಿರೇಮಠ (ಧಾರವಾಡ), ಇಲಾಖೆಯ ನಿರ್ದೇಶಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCOVID 19Education DepartmentKannada NewsKannada News LiveKannada News OnlineKannada News WebsiteKannada WebsiteLatest News KannadaMinister SureshkumarNews in KannadaNews KannadaSSLC ExamState Newsಎಸ್ ಎಸ್ ಎಲ್ ಸಿ ಪರೀಕ್ಷೆಕೋವಿಡ್-19ಬೆಂಗಳೂರುಶಿಕ್ಷಣ ಇಲಾಖೆಸಚಿವ ಎಸ್. ಸುರೇಶ್ ಕುಮಾರ್
Share199Tweet123Send
Previous Post

ನಾಗರೀಕತೆ ಬೆಳೆದಂತೆ ಪರಿಸರದ ಬಗೆಗಿನ ಕಾಳಜಿ ಕ್ಷೀಣಿಸುತ್ತಿರುವುದು ದುರಂತದ ಸಂಗತಿ: ಪ್ರೊ. ವೀರಭದ್ರಪ್ಪ

Next Post

ಕೊಪ್ಪಳ: ಹೂಸಕನಕಾಪುರದಲ್ಲಿ 200 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಸರಳ ಭೂಮಿ ಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಪ್ಪಳ: ಹೂಸಕನಕಾಪುರದಲ್ಲಿ 200 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಸರಳ ಭೂಮಿ ಪೂಜೆ

ಕೊಪ್ಪಳ: ಹೂಸಕನಕಾಪುರದಲ್ಲಿ 200 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಸರಳ ಭೂಮಿ ಪೂಜೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

April 2, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL