ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಿಗಿದ್ದ ಗೊಂದಲಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. 8.76 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. 7306 ಪರೀಕ್ಷಾ ಕೇಂದ್ರಗಳನ್ನೂ 6 ಸ್ಥಾಪಿಸಲಾಗಿದೆ. ಪರೀಕ್ಷೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಳೆದ ಬಾರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿ ವಿಶೇಷ ಪರಿಸ್ಥಿತಿ ಮಧ್ಯೆ ಪರೀಕ್ಷೆ ನಡೆಸಲಾಗುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಿದೆ. ಆರೋಗ್ಯ ಇಲಾಖೆಯ ಆಧಿಕಾರಿಗಳ ಸಲಹೆ ಪಡೆಯಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಸಮಾಜವಿಜ್ಞಾನ, ವಿಜ್ಞಾನ ಹಾಗೂ ಗಣಿತದ ಒಂದು ಪತ್ರಿಕೆ ಹಾಗೂ ಕನ್ನಡ ಹಿಂದಿ ಇಂಗ್ಲೀಷ್ ಸೇರಿ ಒಂದು ಪರೀಕ್ಷೆ ನಡೆಯಲಿದೆ ಎಂದರು.
ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ:
ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟಣೆಗೂ ಮುನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಜುಲೈನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಪೂರ್ವ ಸಿದ್ಧತೆಯನ್ನು ಅವಲೋಕಿಸಿದರು.
ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಿಗೆ ವಿಡಿಯೋ ಸಂವಾದದ ಮೂಲಕ ನಿರ್ದೇಶನಗಳನ್ನು ನೀಡಿದರು.
ಪರೀಕ್ಷಾ ದಿನಾಂಕ ಪ್ರಕಟಣೆಗೂ ಮುನ್ನ ಪರೀಕ್ಷೆಗಳು ಯಶಸ್ವಿಯಾಗಿ ನಡೆಯಲು ಎಲ್ಲ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಭೆಯಲ್ಲಿ ಮಾರ್ಗದರ್ಶನ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post