ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿಗೆ ಪರೀಕ್ಷೆ ನಡೆಸದೇ ಫಲಿತಾಂಶ ಕೊಡುವುದು ಸುಲಭವಲ್ಲ. ಕಳೆದ ವರ್ಷವೂ 9ನೆಯ ತರಗತಿ ಪರೀಕ್ಷೆ ನಡೆದಿಲ್ಲದ ಕಾರಣ ಪ್ರಸಕ್ತ ಎಸ್‌ಎಸ್‌ಎಲ್‌ಸಿ ಮಕ್ಕಳನ್ನು ಕಳೆದ ವರ್ಷದ ಫಲಿತಾಂಶದ ಆಧಾರದ ಮೇಲೆ ತೇರ್ಗಡೆಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಈಗಾಗಲೇ ನಡೆಸಿರುವ ಕೆಲ ಸಮೀಕ್ಷೆಗಳ ಪ್ರಕಾರ ಪರೀಕ್ಷೆ ಬೇಡ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ, ಎಸ್‌ಎಸ್‌ಎಲ್‌ಸಿಗೆ ಪರೀಕ್ಷೆ ನಡೆಸದೇ ಇರುವುದು ಸುಲಭವಿಲ್ಲ. ಈ ಬಾರಿ 8 ಲಕ್ಷ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದಾರೆಂದು ಹೇಳಿದ್ದಾರೆ.
ಪ್ರಶ್ನೆಗಳು ಸರಳ ಹಾಗೂ ನೇರವಾಗಿರಲಿದ್ದು, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಸೇರಿಸಿ ಒಂದು ಪತ್ರಿಕೆ ನೀಡಲಾಗುತ್ತದೆ. ಬಹು ಆಯ್ಕೆ ಮಾದರಿಯ ಪ್ರಶ್ನೆಗಳನ್ನು ಕೇಳಲಾಗುವುದು. ವಿದ್ಯಾರ್ಥಿಗಳು ಆತಂಕ ಪಡುವ ಆಗತ್ಯವಿಲ್ಲ. ಇದೇ ರೀತಿ ಭಾಷಾ ವಿಷಯಗಳ ಇನ್ನೊಂದು ಪತ್ರಿಕೆ ಇರಲಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post