ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 #SSLC Result-1 ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಮೇ.2ರ ಶುಕ್ರವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾಳೆ ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದರು.

KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶವನ್ನು ವಿದ್ಯಾರ್ಥಿಗಳು ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.

ಈ ವರ್ಷ ಇನ್ನೂ ಎರಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (ಪರೀಕ್ಷೆ-2 ಮತ್ತು ಪರೀಕ್ಷೆ-3) ನಡೆಯಲಿವೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳಿಗೆ ಇನ್ನೂ ಎರಡು ಅವಕಾಶಗಳಿವೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post