ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆರ್‌ಸಿಬಿ ವಿಜಯೋತ್ಸವ ಆಚರಣೆ #RCB Victory Celebration ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ #Chinnaswamy Stadium ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ #Stampede Case ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, #CM Siddaramaiah ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DCM D K Shivakumar ಮತ್ತು ಗೃಹ ಸಚಿವ ಜಿ. ಪರಮೇಶ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೈತಿಕ ಹೊಣೆ ಹೊರಬೇಕಾಗುತ್ತದೆ. ನಾನು ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್‌ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಕ್ಕಾಗಿ ಬಿಜೆಪಿ ಮಾಜಿ ಶಾಸಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.












Discussion about this post