ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ್ದು, ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡುವ ಮೂಲಕ ಎಲ್ಲರನ್ನೂ ಸಮಾಧಾನ ಪಡಿಸುವ ಕೆಲಸ ಮಾಡಿದ್ದಾರೆ.
ಪ್ರಮುಖವಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಅಭಿವೃದ್ಧಿ ಕಾರ್ಯಗಳಿಗೆ ಯೋಜನೆ ಹಾಗೂ ಅನುದಾನವನ್ನು ಘೋಷಣೆ ಮಾಡಿದ್ದಾರೆ.

- ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಲಿದೆ;
- ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.
- ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ಅಭಿವೃದ್ಧಿ.
Also read: ಫೆ.18ರಂದು ಪರೀಕ್ಷಾ ಸಮಯದಲ್ಲಿ ಪೋಷಕರ ಪಾತ್ರ ವಿಶೇಷ ಕಾರ್ಯಾಗಾರ
- ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿ.
- ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ-ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿ ತಯಾರಿ.
- ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆಯನ್ನು ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿ.
- ನಗರ ಪ್ರದೇಶದ ಎಲ್ಲಾ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಮೃತ್ 2.0 ಕೇಂದ್ರ ಪುರಸ್ಕೃತ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು 4,615 ಕೋಟಿ ರೂ. ಗಳಾಗಿದೆ. ಕಳೆದ ವರ್ಷ ಈ ಉದ್ದೇಶಕ್ಕಾಗಿ ನಾವು 320 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ 200 ಕೋಟಿ ರೂ. ಒದಗಿಸಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರನ್ನು ಒದಗಿಸುವ ಗುರಿ.
- ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ಕೇಂದ್ರ ಸರ್ಕಾರದ ಪಾಲು 2,185 ಕೋಟಿ ರೂ.ಗಳನ್ನು ಒಳಗೊಂಡಂತೆ 5,072 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ನಮ್ಮ ಜಲ ಮೂಲಗಳನ್ನು ಮಲಿನಗೊಳಿಸುವ ದ್ರವ ತ್ಯಾಜ್ಯಗಳ ಸಂಸ್ಕರಣೆ, ಲೆಗೆಸಿ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡುವ ಮೂಲಕ ನಗರಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಾಣ ಮಾಡಲು ಒತ್ತು.
- ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದ ಯೋಜನೆಯಾದ ಅಮೃತ್ 2.0 ಅಡಿಯಲ್ಲಿ 539 ಕೋಟಿ ರೂ. ಮೊತ್ತದಲ್ಲಿ ಕೆರೆ ಹಾಗೂ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳನ್ನು ಆಯ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿ.
- ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯಾದ್ಯಂತ ಜಾರಿ.
- ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು 3ಡಿ ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್ ಮತ್ತು ಮರು ಮೌಲ್ಯಮಾಪನ.
- ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸೇವೆ.
- ನೇರ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ನೇರಪಾವತಿಯಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರಿಗೂ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ.
- ಸಮರ್ಪಕ ಹಾಗೂ ಯೋಜಿತ ನಗರೀಕರಣಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲಾ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲು ಕ್ರಮ.
- ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ.
- ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post