No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

ಕಾವೇರಿ ವಿಚಾರದಲ್ಲಿ ಕೇಂದ್ರ ಸರಕಾರ, 25 ಸಂಸದರು ರಾಜ್ಯದ ಜೊತೆಗಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 29, 2023
in ಬೆಂಗಳೂರು ನಗರ
0
ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕಾಂಗ್ರೆಸ್ಸಿನವರು 25 ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಿಂದೆಯೂ, ಇವತ್ತು ಮತ್ತು ಮುಂದೆಯೂ ಕರ್ನಾಟಕದ ಜೊತೆಗಿದೆ. ರಾಜ್ಯದ 25 ಸಂಸದರೂ ರಾಜ್ಯದ ನೆಲ, ಜಲದ ಪರವಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ MP Tejaswi Surya ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟಿನಲ್ಲಿ ಕಾವೇರಿ ನೀರಿನ ಆದೇಶದ ಸಂಬಂಧ ಅದನ್ನು ಪರಿವರ್ತಿಸಲು 2018ರಲ್ಲಿ ಕೋರಲಾಗಿತ್ತು. ಅದಕ್ಕಾಗಿ ಅಫಿಡವಿಟ್ ಸಲ್ಲಿಸಲಾಗಿತ್ತು. ಹೆಚ್ಚು ನೀರು ಕೊಡಲು ಕೇಳಲಾಗಿತ್ತು. ಪರಿಣಾಮವಾಗಿ ಸುಪ್ರೀಂ ಕೋರ್ಟ್ ಆದೇಶ ಮಾರ್ಪಾಡು ಮಾಡಿ 14.75 ಟಿಎಂಸಿ ಹೆಚ್ಚು ನೀರನ್ನು ಕೊಟ್ಟಿತ್ತು. ಅದರಲ್ಲಿ ಹಿಂದಿನ ಸಚಿವ ಅನಂತಕುಮಾರರ ಪಾತ್ರ ಪ್ರಮುಖವಾಗಿತ್ತು ಎಂದು ವಿವರಿಸಿದರು.
ನೀರಿನಲ್ಲಿ ರಾಜಕೀಯ ನಮ್ಮದಲ್ಲ. ಕರ್ನಾಟಕಕ್ಕೆ ನಮ್ಮ ಬದ್ಧತೆ ಇದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 24, 25ನೇ ಸಭೆಯಲ್ಲಿ ರಾಜ್ಯದ ಪರವಾಗಿ ಸಂಸದರು ನಿಂತಿದ್ದಾರೆ. ರಾಜ್ಯ ಸರಕಾರದ ವಸ್ತುಸ್ಥಿತಿ ಕುರಿತು ವರದಿಯನ್ನು ನಾವು ಬೆಂಬಲಿಸಿದ್ದೇವೆ. ಇದರ ಹಿಂದೆ ರಾಜ್ಯ 25 ಸಂಸದರ ಪ್ರಯತ್ನ ಇತ್ತು. ಮಾನ್ಯ ಯಡಿಯೂರಪ್ಪ, ಪ್ರಲ್ಹಾದ್ ಜೋಷಿ, ನಾನು, ಪಿ.ಸಿ.ಮೋಹನ್, ಸದಾನಂದ ಗೌಡ, ಮುನಿಸ್ವಾಮಿ, ಪ್ರತಾಪಸಿಂಹ ಮತ್ತಿತರರು ಇದಕ್ಕಾಗಿ ಶ್ರಮಿಸಿದ್ದೇವೆ. ನಾನು, ಪಿ.ಸಿ. ಮೋಹನ್, ಸದಾನಂದ ಗೌಡ, ಮುನಿಸ್ವಾಮಿ, ಪ್ರತಾಪಸಿಂಹ ಮತ್ತಿತರರು ಪ್ರಲ್ಹಾದ್ ಜೋಷಿಯವರ ನೇತೃತ್ವದಲ್ಲಿ ಕೇಂದ್ರ ಸಚಿವರನ್ನೂ ಭೇಟಿ ಮಾಡಿದ್ದೇವೆ ಎಂದು ವಿವರ ನೀಡಿದರು.

ಪ್ರಲ್ಹಾದ್ ಜೋಷಿ, ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಸಂಸದರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್‍ರನ್ನು Gajendra Singh Shekavath ಭೇಟಿ ಮಾಡಿದ್ದಾರೆ. ಇದೆಲ್ಲದರ ಬಳಿಕ ಮಾಧ್ಯಮಗಳ ಮುಂದೆ 25 ಸಂಸದರ ನಿಲುವಿನ ಬಗ್ಗೆ ಪ್ರಶ್ನಿಸುವುದು ರಾಜಕೀಯ ಹೊರತು ಮತ್ತೇನಲ್ಲ ಎಂದು ಆಕ್ಷೇಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ ಎಂದು ತಿಳಿಸಿದರು.
ರಾಜ್ಯ ಸರಕಾರದ ನಿಲುವನ್ನು ಸತತವಾಗಿ ನಾವು ಸಮರ್ಥಿಸಿದ್ದೇವೆ. ಕರ್ನಾಟಕದಲ್ಲಿ ನೀರಿನ ಕೊರತೆ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಪರವಾಗಿ ಕೇಂದ್ರದ ಅಧಿಕಾರಿಗಳು ವಾದ ಮಾಡಿಲ್ಲವೆಂದು ಸಿಎಂ, ಡಿಸಿಎಂ ಅವರು ದಾಖಲೆ ನೀಡಿ ಹೇಳಲಿ ಎಂದು ಸವಾಲೆಸೆದರು.

ನೀರು, ನಾಡಿನ ನುಡಿ, ಭಾಷೆ ವಿಚಾರದಲ್ಲಿ ಬಿಜೆಪಿ, ಕಾಂಗ್ರೆಸ್ ಬೇರೆಬೇರೆಯಲ್ಲ. ನಾವು ನಾಡಿನ ನ್ಯಾಯದ ಪರ ಇರಬೇಕು. ಈ ವಿಚಾರದಲ್ಲಿ ರಾಜಕೀಯ ಮಾಡದಿರಿ ಎಂದು ಮನವಿ ಮಾಡಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ವಸ್ತುಸ್ಥಿತಿ ತಿಳಿಯದೆ ಎಸಿ ಕೊಠಡಿಯಲ್ಲಿ ಕುಳಿತು ವಿಡಿಯೋ ಕಾನ್ಫರೆನ್ಸ್ ಮೂಲಕ ನೀರು ಬಿಡಲು ಸೂಚಿಸಬಾರದು. ತಜ್ಞರ ಮೂಲಕ ವಸ್ತುಸ್ಥಿತಿ ತಿಳಿದುಕೊಳ್ಳಿ ಎಂದು ಒತ್ತಾಯಿಸಿದರು. ಇದಕ್ಕಾಗಿ ತಜ್ಞರ ಸಮಿತಿ ಕಳಿಸಲು ರಾಜ್ಯ ಸರಕಾರ ಆಗ್ರಹಿಸಬೇಕು ಎಂದು ಕೋರಿದರು.
ಮೇಕೆದಾಟು ಯೋಜನೆಗೆ ಅನುಮತಿ ಪಡೆಯಿರಿ
ಕಾಂಗ್ರೆಸ್- ಡಿಎಂಕೆ ‘ಇಂಡಿಯ’ ಮೈತ್ರಿಕೂಟದಲ್ಲಿವೆ. ರಾಜ್ಯದ ಸಂಕಷ್ಟದ ಸಂದರ್ಭದಲ್ಲಿ ತಮಿಳುನಾಡಿನ ಜೊತೆ ಸಲೀಸಾಗಿ ಮಾತನಾಡಲು ಕಾಂಗ್ರೆಸ್ಸಿಗರಿಗೆ ಅವಕಾಶವಿದೆ. ರಾಜಕೀಯ ದೋಸ್ತಿಯನ್ನು ಸಮಸ್ಯೆ ಪರಿಹಾರಕ್ಕಾಗಿ ಬಳಸಿ. ಮೇಕೆದಾಟು ಯೋಜನೆಗೆ ಅನುಮತಿ ಪಡೆದುಕೊಳ್ಳಿ ಎಂದು ತೇಜಸ್ವಿ ಸೂರ್ಯ ಅವರು ಆಗ್ರಹಿಸಿದರು.

ಕರ್ನಾಟಕದ ಇತಿಹಾಸದಲ್ಲಿ ಎಂದೆಂದಿಗೂ ಕಾವೇರಿ ಸಮಸ್ಯೆ ಪರಿಹರಿಸಿದವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಎಂದು ದಾಖಲಾಗುತ್ತದೆ. ಖಾಯಂ ಪರಿಹಾರ ನೀಡಿದವರೆಂದು ನಿಮಗೆ ಕ್ರೆಡಿಟ್ ಸಿಗುತ್ತದೆ ಎಂದು ತಿಳಿಸಿದರು. ಕಾವೇರಿ ನೀರಿನ ವಿಷಯದಲ್ಲಿ ಸ್ಟಾಲಿನ್ ಜೊತೆ ಮಾತನಾಡುವ ವಿಚಾರದಲ್ಲಿ ಬಿಜೆಪಿ ನಿಮ್ಮ ಜೊತೆಗಿದೆ ಎಂದು ತಿಳಿಸಿದರು.
ಇವತ್ತು ರಾಜ್ಯದಲ್ಲಿ ಹಲವಾರು ರೈತಪರ ಸಂಘಟನೆಗಳು ಕುಡಿಯುವ ನೀರಿಗೆ ಸಂಕಷ್ಟ ಇದ್ದರೂ ಮಂಡ್ಯ ಮತ್ತು ಹಲವಾರು ಭಾಗದ ರೈತರಿಗೆ ಬೆಳೆಗಳಿಗೆ ನೀರಿನ ಕೊರತೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಬಂದ್ ಕರೆಕೊಟ್ಟಿದ್ದಾರೆ. ಈ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದರು.

Also read: ಬಾಲ್ ಹೇಗೆ ಎಸೆಯುತ್ತೀರಿ? ಹೇಗೆ ಗುರುತಿಸುತ್ತೀರಿ? ಅಂಧ ಕ್ರಿಕೆಟಿಗರಿಗೆ ಕುತೂಹಲಕಾರಿ ಪ್ರಶ್ನೆ ಕೇಳಿದ ಸಿಎಂ

ಕಾವೇರಿ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ವಸ್ತುಸ್ಥಿತಿ ಮಂಡನೆಯಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಇದು ಖಂಡನೀಯ ಎಂದು ತಿಳಿಸಿದರು. ಇದರಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿವರಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ತನ್ನ ವೈಫಲ್ಯ ಮರೆಮಾಚಿ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತಿದೆ. ನೆಲ, ಜಲದಂಥ ವಿಚಾರದಲ್ಲಿ ಎಲ್ಲ ಪಕ್ಷಗಳೂ ಒಂದಾಗಿ ಪ್ರಯತ್ನ ಮಾಡಬೇಕಿದೆ. ಶೇ 60ರಷ್ಟು ಮಳೆ ಕೊರತೆ ಆಗಿದೆ. ಕಾವೇರಿ ಕೊಳ್ಳ ಪ್ರದೇಶದಲ್ಲಿ 32 ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ಪ್ರಕಟಿಸಲಾಗಿದೆ. ಜಲವರ್ಷದಲ್ಲಿ ಜುಲೈ ಮುಕ್ತಾಯದವರೆಗೆ 106 ಟಿಎಂಸಿ ಬೇಕು. ಆದರೆ, 52 ಟಿಎಂಸಿ ನೀರಿದೆ. ರಾಜ್ಯದಲ್ಲಿ ಮುಂಗಾರು ಸಂಪೂರ್ಣ ವಿಫಲವಾಗಿದೆ. ತಮಿಳುನಾಡಿಗೆ ಮುಂಗಾರು, ಹಿಂಗಾರಿನಲ್ಲೂ ಮಳೆ ಬೀಳುತ್ತದೆ ಎಂದು ತಿಳಿಸಿದರು.

ಮಳೆಗಾಲ ಮುಗಿದ ಬಳಿಕ ನೀರಿನ ಕೊರತೆ ಬರಲಿದ್ದು, ಆಗ ತಮಿಳಿನಾಡಿನಿಂದ ಕರ್ನಾಟಕಕ್ಕೆ ನೀರನ್ನು ಪಂಪ್ ಮಾಡಲು ಸೂಚಿಸಲು ಸಾಧ್ಯವೇ ಎಂದು ಪ್ರಶ್ನೆಯನ್ನೂ ಮುಂದಿಟ್ಟರು. ಇದನ್ನು ರಾಜ್ಯ ಕಾಂಗ್ರೆಸ್ ಸರಕಾರವು ಸಮರ್ಪಕವಾಗಿ ತಿಳಿಸಿಲ್ಲ; ವಾದ ಮಾಡಿಲ್ಲ. ಇದರಿಂದ ನಮ್ಮ ವಿರುದ್ಧ ಆದೇಶಗಳು ಬಂದಿವೆ ಎಂದು ನುಡಿದರು.
ಬೆಂಗಳೂರು ಬಂದ್ ಇದ್ದಾಗ 3 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶ ಮಾಡಿದರು. ಇಡೀ ರಾಜ್ಯ ಮತ್ತು ಎಲ್ಲ ಪಕ್ಷಗಳು ಇದನ್ನು ಒಕ್ಕೊರಲಿನಿಂದ ವಿರೋಧಿಸಬೇಕಿತ್ತು. ಆದರೆ, ಇದು ರಾಜ್ಯದ ಪರ ಆದೇಶ ಎಂದು ಸಿಎಂ ಮತ್ತು ಡಿಸಿಎಂ ಹೇಳಿಕೆ ಕೊಟ್ಟರು. ಬಳಿಕ ಸುಪ್ರೀಂ ಕೋರ್ಟಿಗೆ ಹೋಗುವುದಾಗಿ ತಿಳಿಸಿದರು. ಸಿಎಂ ಮತ್ತು ಡಿಸಿಎಂಗೆ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದರು.

ಸಿಎಂ ಮತ್ತು ಡಿಸಿಎಂ ನಡುವೆ ಸಮನ್ವಯತೆ ಕೊರತೆ ಇದೆ. ಬೆಂಗಳೂರಿನಲ್ಲೂ ಕುಡಿಯುವ ನೀರಿನ ಕೊರತೆ ಆದೀತೆಂದು ವಕೀಲರ ವಾದ ಇದ್ದರೆ, ಇನ್ನೊಂದೆಡೆ ಪ್ರಾಧಿಕಾರದ ಸೂಚನೆಯನ್ನು ಸರಕಾರ ಸ್ವಾಗತಿಸಿದೆ. ಹಾಗಿದ್ದಾಗ, ವಕೀಲರ ಮನಸ್ಥಿತಿ ಹೇಗಿದ್ದೀತು ಎಂದು ಪ್ರಶ್ನಿಸಿದರು.

http://kalpa.news/wp-content/uploads/2023/05/VID-20230516-WA0005.mp4

ಸಂಸದ ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯ ನಾರಾಯಣ್, ಶಾಸಕರಾದ ಎಸ್.ಮುನಿರಾಜು, ಸಿ.ಕೆ.ರಾಮಮೂರ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Previous Post

ಬಾಲ್ ಹೇಗೆ ಎಸೆಯುತ್ತೀರಿ? ಹೇಗೆ ಗುರುತಿಸುತ್ತೀರಿ? ಅಂಧ ಕ್ರಿಕೆಟಿಗರಿಗೆ ಕುತೂಹಲಕಾರಿ ಪ್ರಶ್ನೆ ಕೇಳಿದ ಸಿಎಂ

Next Post

ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು: ಹೋರಾಟಗಾರರ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು: ಹೋರಾಟಗಾರರ ಒತ್ತಾಯ

ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು: ಹೋರಾಟಗಾರರ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL