No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆ: ಸಿದ್ಧರಾಮಯ್ಯ ಕೆಂಡಾಮಂಡಲ

kalpa News by kalpa News
August 19, 2022
in ಬೆಂಗಳೂರು ನಗರ
0
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಿನ್ನೆ ಕೊಡಗಿನ ಕುಶಾಲನಗರದಲ್ಲಿ ಸಿದ್ಧರಾಮಯ್ಯ Siddaramaiah ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಘೇರಾವ್ ಹಾಕಿರುವ ಘಟನೆಗೆ ಸಂಬಂಧಪಟ್ಟಂತೆ ಸಿದ್ಧರಾಮಯ್ಯ ಅವರು ಕೆಂಡಾಮಂಡಲವಾಗಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ.@BJP4Karnataka ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ.

ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ.

— Siddaramaiah (@siddaramaiah) August 19, 2022


ಈ ಕುರಿತು ಟ್ವೀಟ್ ಮಾಡಿರುವ ಅವರು, ಇದೇ ತಿಂಗಳ ೨೬ರಂದು ಕೊಡಗಿನ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಕಾರ ತೀರಿಸಿಕೊಳ್ಳುತ್ತೇವೆ ಎಂದು ಆಕ್ರೋಶದ ಮಾತುಗಳನ್ನಾಡಿರುವ ಅವರು, ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿದ್ದಾರೆ.
ಈ ತಿಂಗಳ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರು ಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ? ಎಂದು ಪ್ರಶ್ನಿಸಿದ್ದಾರೆ.
ನಾವು ಸಮಾಜದಲ್ಲಿ ಸಾಮರಸ್ಯ ಬಯಸುವವರು, ಎಲ್ಲ ಜಾತಿ, ಧರ್ಮದ ಜನರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಬಯಸುವವರು. ನಾವು ಬಿಜೆಪಿ ಅವರಂತೆ ಮತ ಧ್ರುವಿಕರಣಕ್ಕಾಗಿ ಸಮಾಜ ಒಡೆಯುವವರಲ್ಲ. ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ? ಶಿವಮೊಗ್ಗದ ಗಲಭೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ. ಸಚಿವ ಸ್ಥಾನ ಕಳೆದುಕೊಂಡು ಮನೆಯಲ್ಲಿರುವ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನ ಖಾತರಿಯೂ ಇಲ್ಲ. ಇದರಿಂದ ಹತಾಶರಾಗಿರುವ ಈಶ್ವರಪ್ಪನವರು ಆರ್ ಎಸ್ ಎಸ್ ಒಡೆಯರನ್ನು ಒಲಿಸಿಕೊಳ್ಳಲು ಇದೆಲ್ಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Also read: ಹೋದಲ್ಲೆಲ್ಲಾ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯಗೆ ಶ್ವಾನದಳ ಸೇರಿ ಭಾರೀ ಪೊಲೀಸ್ ಭದ್ರತೆ

ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ. ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲ. ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಇದನ್ನೇ ನಾನು ಪ್ರಶ್ನಿಸಿದ್ದು ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಹಾತ್ಮ ಗಾಂಧೀಜಿಯವರ ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ ಮಖ್ಯಮಂತ್ರಿ ಅವರು, ತಮ್ಮದೇ ಪಕ್ಷದ ಕಾರ್ಯಕರ್ತರು ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗೆ ಮಾಡಿದ್ದಾರೆ. ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಸಾವರ್ಕರ್ ಅವರನ್ನು ಹೊತ್ತು ಮೆರೆಯುತ್ತಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ೫೨ ವರ್ಷಗಳ ಕಾಲ ಆರ್‌ಎಸ್‌ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಯಾಕೆ ಹಾರಿಸಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುತ್ತೀರಾ ಎಂದು ಸವಾಲು ಹಾಕಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ ಇಲ್ಲ, ಅಂಬೇಡ್ಕರ್ ಅವರೂ ಇಲ್ಲ ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ. ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿಧಯವಾಗಿ ಕೆಳಗಿಳಿಸಿದರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಈಗ ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ ಎಂದು ಹೀಯಾಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSiddaramaiahಬೆಂಗಳೂರುಸಿದ್ಧರಾಮಯ್ಯ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರದ ಯೋಜಿತ ಪ್ರತಿಭಟನೆ, ಗಾಂಧಿಯನ್ನು ಕೊಂದವರು ನನ್ನನ್ನು ಬಿಡುತ್ತಾರಾ? ಸಿದ್ಧು ಆತಂಕ

Next Post

ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ

kalpa News

kalpa News

Next Post
ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ

ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL