ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಕ್ಷಣಾ ವಯಲದಲ್ಲಿ ಬಂಧನ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧ ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ65% ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಹೇಳಿದರು.
ಅವರು ಇಂದು ಏರೋ ಇಂಡಿಯಾ 2023 ರ ಬಂಧನ್ – ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

Also read: ಮೂರು ತಿಂಗಳು ದಣಿವರಿಯದೇ ಕೆಲಸ ಮಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನಮ್ಮ ಉತ್ಪಾದನೆ ಸಾಮರ್ಥ್ಯ ಅಂದುಕೊಂಡದ್ದಕ್ಕಿಂತ ಹೆಚ್ಚಿದೆ
ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ನಮ್ಮ ದೇಶದ ಉತ್ಪಾದನಾ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿದೆ. ಎಂಎಸ್ಎಂಇ ಕೂಡ ಇದನ್ನು ಉತ್ಪಾದನೆ ಮಾಡಬಲ್ಲದಾಗಿದೆ. ಸಧ್ಯದ ಪರಿಸ್ಥಿತಿಯಲ್ಲಿ ರಕ್ಷಣಾ ವಸ್ತುಗಳ ಉತ್ಪಾದನಾ ಸಂಸ್ಥೆಗಳು ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದ್ದು, ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉತ್ಪಾದನಾ ವಲಯದಲ್ಲಿ ಡೊಮೇನ್ ಬದಲಾವಣೆಯಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಿದೆ. ಆದ್ದರಿಂದ ನಾವು ಮಹತ್ವಾಕಾಂಕ್ಷೆಯಿಂದ ವೈಜ್ಞಾನಿಕವಾಗಿ ಯೋಚನೆ ಮಾಡಬೇಕಿದೆ. ಈ ಎಲ್ಲ ವಿಷಯಗಳನ್ನು ಬಂಧನ ಹೆಸರಲ್ಲಿ ನಾವು ಒಟ್ಟಿಗೆ ತಂದಿದ್ದೀವಿ. ಇಂದು ಸಹಿ ಆಗಿರುವ ಎಲ್ಲ ಒಪ್ಪಂದಗಳು ಭವಿಷ್ಯದ ಅಗತ್ಯ, ಬೆಳವಣಿಗೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಾಕ್ಷಿ ಆಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
32 ಒಪ್ಪಂದಗಳಿಗೆ ರಾಜ್ಯ ಸಹಿ
ಬೆಂಗಳೂರಿನಲ್ಲಿ ಏರೋ ಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತು ಅದರ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ನನ್ನೆಲ್ಲಾ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗೀ ಸಂಸ್ಥೆಗಳು 65% ಪಾಲನ್ನು ಪೂರೈಸುತ್ತಿದೆ. 2900 ಕೋಟಿಗೂ ಹೆಚ್ಚು ಮೌಲ್ಯದ ಹೂಡಿಕೆಯ 32 ಒಪ್ಪಂದಗಳಿಗೆ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಸಹಿ ಹಾಕಿದೆ. ಈ ಏರೋ ಇಂಡಿಯಾ ಪ್ರದರ್ಶನ “ಟಾಕ್ ಆಫ್ ದಿ ಟೌನ್” ಆಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post