ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ .
ಸುದ್ದಿಗಾರರೊಂದಿಗೆ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ . ರವಿಕುಮಾರ್ , ಕೊರೋನಾ ನಿಯಂತ್ರಣಕ್ಕೆ ವಾರ ಪೂರ್ತಿ ಕರ್ಪ್ಯೂ ಹೇರಿದರೆ ಒಳ್ಳೆಯದು ಎಂದು ಎಲ್ಲರೂ ಹೇಳುತ್ತಿದ್ದಾರೆ . ಆದರೆ ಜನರ ಕೇಳಬೇಕಲ್ಲ . ವಾರವೀಡಿ ಕರ್ಪ್ಯೂ ಜಾರಿ ಮಾಡುವುದು ಬೇಡವೆಂದು ಹೇಳುತ್ತಿದ್ದಾರೆ ಎಂದರು.
ವೀಕೆಂಡ್ ಮಾದರಿ ಕರ್ಪ್ಯೂವನ್ನು ಎಲ್ಲರೂ ಬೆಸ್ಟ್ ಅನ್ನುತ್ತಾರೆ. ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯಾದ್ಯಂತ ಮುಂದಿನ 15 ದಿನ ಲಾಕ್ ಡೌನ್ ಮಾಡುವ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post